ಜಿರಿಯಾಟ್ರಿಕ್ ಕಾನ್ಸೆಪ್ಟ್ ಪುಸ್ತಕದ ಎರಡನೇ ಆವೃತ್ತಿ ಬಿಡುಗಡೆ
Second Edition of Geriatric Concept Book Released
ಜಿರಿಯಾಟ್ರಿಕ್ ಕಾನ್ಸೆಪ್ಟ್ ಪುಸ್ತಕದ ಎರಡನೇ ಆವೃತ್ತಿ ಬಿಡುಗಡೆ
ವಿಜಯಪುರ, 05 ; ನಗರಷ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಜೆರಿಯಾಟ್ರಿಕ್ಸ್ ವಿಭಾಗದ ವತಿಯಿಂದ ಸಂಪಾದಿಸಲಾದ ಜಿರಿಯಾಟ್ರಿಕ್ ಕಾನ್ಸೆಪ್ಟ್ ಪುಸ್ತಕದ ಎರಡನೇ ಆವೃತ್ತಿಯನ್ನು ವಿವಿ ಸಮಕುಲಾಧಿಪತಿ ಡಾ. ವೈ.ಎಂ. ಜಯರಾಜ ಸೋಮವಾರ ಬಿಡುಗಡೆ ಮಾಡಿದರು.
ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಈ ಪುಸ್ತಕವು ವೈದ್ಯಕೀಯ, ನರ್ಸಿಂಗ್, ಫಾರ್ಮಾ ಮತ್ತು ಭೌತಚಿಕಿತ್ಸೆ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿದೆ ಎಂದು ತಿಳಿಸಿದರು. ಈ ಪುಸ್ತಕವನ್ನು ನಾಡೋಜ ಡಾ. ಪಿ.ಎಸ್. ಶಂಕರ ಮತ್ತು ಡಾ. ಎ.ಪಿ. ಅಂಬಲಿ ಸಂಪಾದಿಸಿದ್ದು, ಬಿ.ಎಲ್.ಡಿ.ಇ. ಡೀಮ್ಡ್ ವಿವಿಯಿಂದ ಪ್ರಕಟಿಸಲಾಗಿದೆ. ಈ ಸಂದರ್ಭದಲ್ಲಿ ವಿವಿ ಕುಲಪತಿ, ಡಾ. ಅರುಣ ಚಂ.ಇನಾಮದಾರ, ಕುಲಸಚಿವ ಡಾ. ಆರ್.ವಿ. ಕುಲಕರ್ಣಿ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ವೈದ್ಯಕೀಯ ವಿಭಾಗದ ಡೀನ ಡಾ. ತೇಜಸ್ವಿನಿ ವಲ್ಲಭ, ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಎಸ್.ಎಸ್. ದೇವರಮನಿ, ವೈದ್ಯಕೀಯ ಅಧೀಕ್ಷಕ, ಡಾ. ಆರ್.ಎಂ. ಹೊನ್ನುಟಗಿ, ವೈದ್ಯಕೀಯ ನಿರ್ದೇಶಕ, ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 