ಕೊರೊನಾ ನಿಯಂತ್ರಣಕ್ಕೆ ಎರಡನೇ ಹಂತದ ಸಭೆ

ಬಳ್ಳಾರಿ೨೫ : ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಎರಡನೇ ಹಂತದ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರ ನೇತೃತ್ವದಲ್ಲಿ ನಡೆಯಿತು. 

   ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸರ್ವಪಕ್ಷಗಳ ಮುಖಂಡರ ಸಭೆಯಲ್ಲಿ ಶಾಸಕರು, ಲೋಕಸಭಾ ಸದಸ್ಯರು ಭಾಗಿಯಾಗಿದ್ದರು. ಸಭೆಯಲ್ಲಿ ಕೊರೊನಾಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿನ ಪ್ರಸ್ತುತ ಸ್ಥಿತಿಗತಿಳ ಬೆಳವಣಿಗೆ ಕುರಿತು ಚಚರ್ಿಸಲಾಯಿತು. 

ಶಾಸಕರಾದ ಸೋಮಶೇಖರರೆಡ್ಡಿ, ಬಿ. ನಾಗೇಂದ್ರ, ಎಂ. ಎಸ್. ಸೋಮಲಿಂಗಪ್ಪ, ಎಂಎಲ್ಸಿ ಅಲ್ಲಂ ವೀರಭದ್ರಪ್ಪ, ಬಳ್ಳಾರಿ ಲೋಕಸಭಾ ಸದಸ್ಯರಾದ ವೈ. ದೇವೇಂದ್ರಪ್ಪ, ಕೊಪ್ಪಳ ಲೋಕಸಭಾ ಸದಸ್ಯ ಸಂಗಣ್ಣ ಕರಡಿ, ಜಿಲ್ಲಾಧಿಕಾರಿ ಎಸ್. ಎಸ್. ನಕುಲ್, ಜಿಲ್ಲಾ ಪಂಚಾಯಿತಿ ಸಿಇಒ ಕೆ. ನಿತೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಕೆ. ಬಾಬಾ ಭಾಗಿಯಾಗಿದ್ದರು.