ವಿಜಯಪುರ ಮಾ.13: ಜಿಲ್ಲೆಯಲ್ಲಿ ಇಂದು ನಡೆದ ದ್ವೀತಿಯು ಪಿಯುಸಿ ವಾರ್ಷಿಕ ಪರೀಕ್ಷೆ-1ರ ಅರ್ಥಶಾಸ್ತ್ರ ಪರೀಕ್ಷೆಗೆ ನೋಂದಾಯಿಸಿಕೊಂಡ 13,680 ವಿದ್ಯಾರ್ಥಿಗಳ ಪೈಕಿ 12,756 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 924 ವಿಧ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ಮಾ.30ರವರೆಗೆ ವಿಸ್ತರಣೆ
ವಿಜಯಪುರ ಮಾ.13: 2023-24ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ, ಅಲೆಮಾರಿ ಹಾಗೂ ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನೀಡಲಾಗುತ್ತಿರುವ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ನಾತಕೋತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 30ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ಅಥವಾ ಣಣಠಿ://ಛಛಿತಿಜ.ಞಚಿಡಿಟಿಚಿಣಚಿಞಚಿ.ರಠ.ಟಿ ಗೆ ಭೇಟಿ ನೀಡಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.