ಬೆಂಗಳೂರು, ಜೂ 5, ಕೊರೋನಾ ಸೋಂಕಿನಿಂದ ಗಂಭೀರ ಸ್ಥಿತಿಗೆ ತಲುಪಿದ್ದ ವ್ಯಕ್ತಿಯ ಮೇಲೆ ವೈದ್ಯರು ನಡೆಸಿದ ಪ್ಲಾಸ್ಮಾ ಥೆರಪಿ ಯಶಸ್ವಿಯಾಗಿದೆ.ಇದು ರಾಜ್ಯದಲ್ಲಿ ಯಶಸ್ವಿಯಾಗಿರುವ ಎರಡನೇ ಪ್ಲಾಸ್ಮಾ ಥೆರಪಿಯಾಗಿದೆ. ಮೂರು ದಿನಗಳ ಹಿಂದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 64 ವರ್ಷದ ವ್ಯಕ್ತಿಗೆ ನಡೆಸಿದ ಪ್ಲಾಸ್ಮಾ ಥೆರಪಿ ಯಶಸ್ವಿಯಾಗಿತ್ತು. ಈಗ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನೆರವಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ ವ್ಯಕ್ತಿಗೆ ಪ್ಲಾಸ್ಮಾ ಥೆರಪಿ ನಡೆಸಲಾಗಿತ್ತು.
ಸೋಂಕಿತ ವ್ಯಕಿಯನ್ನು ಸಾಮಾನ್ಯ ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದ್ದು, ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮೇ 25 ರಂದು ಮಧುಮೇಹ ಸೇರಿದಂತೆ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದರು. ಇವರಿಗೆ ಮೇ27ರಂದು ಪ್ಲಾಸ್ಮಾ ಥೆರಪಿ ನಡೆಸಲಾಗಿತ್ತು. ಮೇ 15ರಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಯೋರ್ವರ ಮೇಲೆ ಪ್ಲಾಸ್ಮಾ ಥೆರಪಿ ಪ್ರಯೋಗಿಸಲಾಗಿತ್ತಾದರೂ, ಅದು ವಿಫಲವಾಗಿತ್ತು.