ಪುಲ್ವಾಮದಲ್ಲಿ ಭದ್ರತಾ ಪಡೆ- ಉಗ್ರರ ನಡುವೆ ಗುಂಡಿನ ಚಕಮಕಿ

ಶ್ರೀನಗರ, ಜ.12:       ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಟ್ರಾಲ್ನ ಗುಲ್ಶನ್ಪೊರದ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ರಾಷ್ಟ್ರೀಯ ರೈಫಲ್, ಜಮ್ಮು-ಕಾಶ್ಮೀರ ಪೊಲೀಸ್ನ ವಿಶೇಷ ಕಾರ್ಯಾಚರಣಾ ಪಡೆ ಮತ್ತು ಸಿಆರ್ಪಿಎಫ್ ಜಂಟಿ ಕಾರ್ಯಾಚರಣಾ ಪಡೆ ಇಂದು ಬೆಳಗ್ಗೆ ಕಾರ್ಯಾಚರಣೆ ನಡೆಸಿತು ಎಂದು ಅಧಿಕೃತ ಮೂಲಗಳು ಯುಎನ್ಐಗೆ ತಿಳಿಸಿವೆ.

ಆದಾಗ್ಯೂ, ಭದ್ರತಾ ಪಡೆ ಅರಣ್ಯ ಪ್ರದೇಶದ ಒಂದು ನಿರ್ದಿಷ್ಟ ಪ್ರದೇಶಕ್ಕೆ ತಲುಪಿದಾಗ ಅಡಗಿ ಕುಳಿತಿದ್ದ ಉಗ್ರರು ಸ್ವಯಂ ಚಾಲಿತ ಶಸ್ತ್ರಾಸ್ತ್ರಗಳೊಂದಿಗೆ ಸೈನಿಕರ ಮೇಲೆ ದಾಳಿ ನಡೆಸಿದರು. ತಕ್ಷಣ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿತು. ಆಗ ಎರಡೂ ಕಡೆಗಳಿಂದ ಗುಂಡಿನ ಚಕಮಕಿ ನಡೆಯಿತು ಎಂದು ಮೂಲಗಳು ತಿಳಿಸಿವೆ.

ಉಗ್ರರು ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಲು ಭದ್ರತಾ ಪಡೆ ಆ ಪ್ರದೇಶದ ಎಲ್ಲಾ ಹೊರಹೋಗುವ ದ್ವಾರಗಳನ್ನು ಮುಚ್ಚಿದ್ದು, ಸ್ಥಳಕ್ಕೆ ಹೆಚ್ಚಿನ ಭದ್ರತಾ ಪಡೆಗಳನ್ನು ಕರೆಸಿ ಅಲ್ಲಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ. 

ನಿನ್ನೆ ಸಂಜೆ ದಕ್ಷಿಣ ಕಾಶ್ಮೀರದ ಸೊಪಿಯಾನ್ನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಹಿಜ್ಬುಲ್ ಮುಜಾಹಿದೀನ್ ಕಮಾಂಡರ್ಗಳನ್ನು ಬಂಧಿಸಿದ ಬಳಿಕ ಭದ್ರತಾ ಪಡೆ ಶೋಧ ಕಾರ್ಯ ಕೈಗೊಂಡಿದೆ.

ಸ್ಥಳದಿಂದ ಎಕೆ 47, ಒಂದು ಪಿಸ್ತೂಲ್ ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.