ಸೆ.3 ರಿಂದ ರಾಜ್ಯಾದ್ಯಂತ ಸೀರತ ಅಭಿಯಾನ
Seerat campaign across the state from September 3
ವಿಜಯಪುರ 01: ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜೀವನ, ತತ್ವ, ಸಂದೇಶ ಕುರಿತು ಇಸ್ಲಾಂ ಧರ್ಮಿಯರಿಗೆ ಹಾಗೂ ಅನ್ಯ ಧರ್ಮಿಯರಿಗೆ ತಿಳಿವಳಿಕೆ ನೀಡುವ ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ಸೆ.3 ರಿಂದ 14 ರ ವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾ ಘಟಕದ ಅಧ್ಯಕ್ಷ ಮಹೆಬೂಬ ಅಲಿ ಬಳಗಾನೂರ ತಿಳಿಸಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜಮಾಅತೆ ಇಸ್ಲಾಮಿ ಹಿಂದ್ ನೇತೃತ್ವದಲ್ಲಿ ನ್ಯಾಯದ ಹರಿಕಾರ ಮಹಮ್ಮದ ಪೈಗಂಬರ್ ಶೀರ್ಷಿಕೆ ಅಡಿಯಲ್ಲಿ ಪ್ರವಾದಿ ಮಹಮ್ಮದ ಪೈಗಂಬರ್ ಮತ್ತು ಇಸ್ಲಾಂ ಧರ್ಮದ ಬಗ್ಗೆ ತಪ್ಪು ಕಲ್ಪನೆಗಳು ಹರಡಲಾಗುತ್ತಿದೆ. ಇದರ ನಿವಾರಣೆಯಾಗಬೇಕಿದೆ. ಧರ್ಮ, ಧರ್ಮಗಳ ನಡುವೆ ಶಾಂತಿ, ಸೌಹಾರ್ದ, ಸಹೋದರತೆ, ಸಹಾನುಭೂತಿ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಈ ಅಭಿಯಾನದ ಅಂಗವಾಗಿ ವಿಜಯಪುರ ನಗರವೂ ಸೇರಿದಂತೆ ಜಿಲ್ಲೆಯಲ್ಲಿ ವಿವಿಧ ಸಮಾಜ ಸೇವಾ ಚಟುವಟಿಕೆಗಳು, ಸಂವಾದ, ವಿಚಾರಗೋಷ್ಠಿ, ಸಾರ್ವಜನಿಕ ಸಭೆಗಳು, ಪ್ರಬಂಧ ಸ್ಪರ್ಧೆ ಹಾಗೂ ಅನಾಥ ಆಶ್ರಯಕ್ಕೆ ಭೇಟಿ ಅವರರೊಂದಿಗೆ ಸಂವಾದ ಕಾರ್ಯಕ್ರಮ ಸೇರಿದಂತೆ ಹಲವಾರು ಕಾರ್ಯಕ್ರಮ ಆಯೋಜನೆ ಮಾಡಿ, ಜನರಿಗೆ ಪ್ರವಾದಿ ಸಂದೇಶಗಳನ್ನು ತಲುಪಿಸುತ್ತಿದೆ ಎಂದರು.
ಪ್ರವಾದಿ ಮಹಮ್ಮದ್ ಪೈಗಂಬರ್ ಅವರು ಸಾಮಾಜಿಕ ಸಮಾನತೆಗೆ ಆದ್ಯತೆ ನೀಡಿದ್ದರು. ಶಿಕ್ಷಣದಲ್ಲಿ ಜ್ಞಾನದ ಜೊತೆ ವೈಚಾರಿಕತೆ ಇರಬೇಕು ಎಂದು ಪ್ರತಿಪಾದಿಸಿದ್ದರು. ಮಹಿಳಾ ವಿಮೋಚಕರಾಗಿದ್ದರು, ಪರಿಸರ ಸಂರಕ್ಷಣೆಗೆ ಒತ್ತು ನೀಡಿದ್ದರು, ಪರಧರ್ಮ ಸಹಿಷ್ಣುತೆಗೆ ಆದ್ಯತೆ ನೀಡಿದ್ದರು ಎಂದು ಅವರು ಹೇಳಿದರು.
ಎರಡು ಪುಸ್ತಕ ಬಿಡುಗಡೆ: ಈ ಅಭಿಯಾನದ ಪ್ರಯುಕ್ತ ಶಾಂತಿ ಪ್ರಕಾಶನದಿಂದ ಪ್ರವಾದಿ ಜೀವನ ಮತ್ತು ಸಂದೇಶ ಗಳ ಬಗ್ಗೆ ಬೆಳಕು ಚೆಲ್ಲುವ ಎರಡು ಹೊಸ ಪುಸ್ತಕಗಳನ್ನು ಅಭಿಯಾನದಲ್ಲಿ ಬಿಡುಗಡೆಯಾಗಲಿವೆ ಎಂದು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸದಸ್ಯರಾದ ಎಂ. ಡಿ ಅಬ್ದುಲ್ ಕದೀರ್, ಯೂಸುಫ್ ಖಾಝಿ, ಸೋಲಿಡಾರಿಟಿ ಯೂಥ್ ಮೂವ್ಮೆಂಟ್ ಅಧ್ಯಕ್ಷ ಅಬ್ದುಲ್ ಹಮೀದ್ ಜಾವೀದ್, ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಜಿಲ್ಲಾ ಉಪಾಧ್ಯಕ್ಷ ಉಬೈದೂರ ರಹೇಮನ್ ಶೈಖ್ ಮುಂತಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 