ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆಯ್ಕೆ

Selected for Republic Day parade

ಕೊಪ್ಪಳ ಜ 24: ಜನವರಿ 26ರಂದು ಬೆಂಗಳೂರಿನಲ್ಲಿ ಜರುಗಲಿರುವ 76ನೇ ಗಣರಾಜ್ಯೊತ್ಸವದ ಕಾರ್ಯಕ್ರಮದಲ್ಲಿ ಎನ್‌.ಎಸ್‌.ಎಸ್ ವಿಭಾಗದಲ್ಲಿನ ಪಥಸಂಚಲನಕ್ಕೆ ನಗರದ ಶ್ರೀ ಗವಿಸಿದ್ಧೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಬಿ.ಎಸ್ಸಿ 3ನೇ ಸೆಮಿಸ್ಟರ್‌ನ ವಿದ್ಯಾರ್ಥಿ ಕು. ಬಸವರಾಜ ಮತ್ತು ಬಿ.ಎ. 3ನೇ ಸೆಮಿಸ್ಟರ್‌ನ ವಿದ್ಯಾರ್ಥಿ ಕು.ಹನುಮಂತ ಇವರು ಆಯ್ಕೆಯಾಗಿರುತ್ತಾರೆ.  

ಸದರಿ ವಿದ್ಯಾರ್ಥಿಗಳಿಗೆ ಶ್ರೀ ಗವಿಸಿದ್ಧೇಶ್ವರ ವಿದ್ಯಾವರ್ಧಕ ಟ್ರಸ್ಟಿನ ಕಾರ್ಯದರ್ಶಿಗಳಾದ ಡಾ.ಆರ್‌.ಮರೇಗೌಡ, ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಚನ್ನಬಸವ ಮತ್ತು ಎನ್‌.ಎಸ್‌.ಎಸ್‌. ಕಾರ್ಯಕ್ರಮಾಧಿಕಾರಿಗಳಾದ ಶರಣಪ್ಪ ಚೌವ್ಹಾಣ ಮತ್ತು ಡಾ. ಜಾಲಿಹಾಳ ಶರಣಪ್ಪ ಹಾಗೂ ಮಹಾವಿದ್ಯಾಲಯದ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.