ನೌಕರರ ಇಲಾಖಾ ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಹಾರೂಗೇರಿ, 16 : ಸಮೀಪದ ಅಲಖನೂರ ಗ್ರಾಮದ ಬಡಿಗನತೋಟ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಪ್ರಾಥಮಿಕ ಶಾಲೆಯ ಶಿಕ್ಷಕಿ ಸನ್ಮತಿ ಪ್ರಭಾಕರ ಅವರು ಇತ್ತೀಚೆಗೆ ನಡೆದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಇಲಾಖಾ ಕ್ರೀಡಾಕೂಟದ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಮತ್ತು ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಿಕ್ಷಕರಾದ ಎಸ್.ಪಿ.ಕುಲಿಗೋಡ ಅವರು ಬಾಡಿಬಿಲ್ಡಿಂಗ್ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಹಾಗೂ ಪವರ್ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟಕ್ಕೆ ಆಯ್ಕೆಯಾದ ಶಿಕ್ಷಕ ಎಸ್.ಪಿ.ಕುಲಿಗೋಡ ಮತ್ತು ಶಿಕ್ಷಕಿ ಸನ್ಮತಿ ಪ್ರಭಾಕರ ಅವರನ್ನು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪ್ರಧಾನ ಗುರುಗಳು ಸತ್ಕರಿಸಿ, ಅಭಿನಂದಿಸಿದ್ದಾರೆ.