ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಆಯ್ಕೆ

ಲೋಕದರ್ಶನ ವರದಿ

ಬೆಳಗಾವಿ 02:  ನಗರದ ಪ್ರತಿಷ್ಠಿತ ಕೆಎಲ್ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ವು ವಿಜ್ಞಾನ ಮಹಾವಿದ್ಯಾಲಯವಾಗಿದ್ದರೂ ಸಹ ಪಠ್ಯದ ಜೊತೆ-ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಮುಂಚೂಣಿಯ ಸ್ಥಾನದಲ್ಲಿ ಹೆಜ್ಜೆಹಾಕುತ್ತಿದೆ.

ಮಹಾವಿದ್ಯಾಲಯದಲ್ಲಿ ವ್ಯಾಸಾಂಗ ಮಾಡುತ್ತಿರುವ ಬಿಎಸ್ಸಿ ದ್ವಿತೀಯ ವರ್ಷದ ವಿದ್ಯಾಥರ್ಿನಿಯಾದ ಪೂಜಾ ಚಿದಾನಂದ ಆನಿಕಿವಿ ದಿ. 26 ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಭಾಗವಹಿಸಿ ಪ್ರಶಂಸೆಗೆ ಪಾತ್ರಳಾಗಿದ್ದಾಳೆ. ಪೂಜಾ ಆನಿಕಿವಿ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮಟ್ಟದಲ್ಲಿ ಎನ್.ಎಸ್.ಎಸ್. ಘಟಕದ ವತಿಯಿಂದ ರಾಜ್ಯ ಮಟ್ಟದ ಗಣರಾಜ್ಯೋತ್ಸವಕ್ಕೆ ಆಯ್ಕೆಯಾದ ಏಕೈಕ ವಿದ್ಯಾಥರ್ಿನಿಯಾಗಿದ್ದಾಳೆ.

ವಿದ್ಯಾಥರ್ಿನಿಯ ಸಾಧನೆಗೆ ಕೆ.ಎಲ್.ಇ. ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಹಾಗೂ ಸದಸ್ಯರು, ಸ್ಥಾನಿಕ ಆಡಳಿತ ಮಂಡಳಿಯ ಕಾಯರ್ಾಧ್ಯಕ್ಷರು ಮತ್ತು ಸದಸ್ಯರು, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ವ್ಹಿ.ಡಿ. ಯಳಮಲಿ, ಪದವಿ ಪೂರ್ವ ಪ್ರಾಚಾರ್ಯರಾದ ಪ್ರೊ. ಎಸ್.ಜಿ. ನಂಜಪ್ಪನವರ ಎನ್.ಎಸ್.ಎಸ್. ಯೋಜನಾಧಿಕಾರಿ ಪ್ರೊ. ಎಸ್.ಎಸ್. ಅಬ್ಬಾಯಿ ಅವರು, ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿವರ್ಗದವರು ಹಾಗೂ ವಿದ್ಯಾಥರ್ಿ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.