ಅಖಿಲ ಭಾರತ ಅಂತರ ವಿಶ್ವವಿದ್ಯಾಲಯದ ಕ್ರೀಡೆಗೆ ಆಯ್ಕೆ

Selection for All India Inter University Sports

ವಿಜಯಪುರ 27: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಥ್ಲೇಟಿಕ್ ಕ್ರೀಡಾಪಟುಗಳು 2024-25ನೇ ಸಾಲಿನ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯದ ಕ್ರೀಡೆಗೆ ಆಯ್ಕೆಯಾಗಿದ್ದು, ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೇಟಿಕ್ ಕ್ರೀಡೆಯು ಇದೇ ದಿ. 26/12/2024 ರಿಂದ 30/12/2024ರ ರವರೆಗೆ ಭುವನೇಶ್ವರದ ಕೆಐಎಸ್‌ಎಸ್ ವಿಶ್ವವಿದ್ಯಾನಿಲಯದಲ್ಲಿ ಜರುಗಲಿದೆ. ಸದರಿ ಕ್ರೀಡಾಕೂಟದಲ್ಲಿ ಮಹಿಳಾ ವಿವಿಯ ಅಥ್ಲೇಟಿಕ್ ಕ್ರೀಡಾಪಟುಗಳು ಭಾಗವಹಿಸುತ್ತಿದ್ದು, ತಂಡದ ತರಬೇತಿದಾರರಾಗಿ ಗೋಪಾಲ ಲಮಾಣಿ ಮತ್ತು ವ್ಯವಸ್ಥಾಪಕರಾಗಿ ಜಬಿನತಾಜ ಜಿಗಳೂರ ಭಾಗವಹಿಸಲಿದ್ದಾರೆ. 

ಆಯ್ಕೆಯಾಗಿರುವ ಕ್ರೀಡಾಪಟುಗಳ ತಂಡಕ್ಕೆ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್‌.ಎಂ.ಚಂದ್ರಶೇಖರ, ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಡಾ.ಹನುಮಂತಯ್ಯ ಪೂಜಾರ, ಸಹ ನಿರ್ದೇಶಕ ವಿಶ್ವನಾಥ ನಡಕಟ್ಟಿ ಮತ್ತು ಕ್ರೀಡಾ ವಿಭಾಗದ ಮುಖ್ಯಸ್ಥ ಪ್ರೊ.ಸಕ್ಪಾಲ್ ಹೂವಣ್ಣ ಶುಭ ಹಾರೈಸಿದ್ದಾರೆ.