ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ೧೨ ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆ

bbmp

ಬೆಂಗಳೂರು, ಜ 18 [ಯುಎನ್ಐ] ಬೃಹತ್ ಬೆಂಗಳೂರು  ಮಹಾನಗರ ಪಾಲಿಕೆಯ ೧೨ ಸ್ಥಾಯಿ ಸಮಿತಿ ಸ್ಥಾನಗಳಿಗೆ ಶನಿವಾರ ಬಿಬಿಎಂಪಿ ಕೆಂಪೇಗೌಡ ಪೌರ ಸಭಾಂಗಣದಲ್ಲಿ ಚುನಾವಣೆ ನಡೆದಿದ್ದು, ಎಲ್ಲಾ ಸ್ಥಾಯಿ ಸಮಿತಿಗಳ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ: ಎನ್.ವಿ. ಪ್ರಸಾದ್ ತಿಳಿಸಿದ್ದಾರೆ.

          ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ ಸ್ಥಾಯಿ ಸಮಿತಿ, ಅಪೀಲುಗಳ ಸ್ಥಾಯಿ ಸಮಿತಿ, ತೋಟಗಾರಿಕೆ ಸ್ಥಾಯಿ ಸಮಿತಿ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸ್ಥಾಯಿ ಸಮಿತಿಗಳಿಗೆ ನಿಗದಿಯಾಗಿದ್ದ ೧೧ ಸ್ಥಾನಗಳಿಗೆ ತಲಾ ೧೨ ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಎಲ್ಲರ ನಾಮಪತ್ರಗಳು ಕ್ರಮಬದ್ದವಾಗಿವೆ ಎಂದು ಪ್ರಾದೇಶಿಕ ಆಯುಕ್ತರು ತಿಳಿಸಿ, ನಾಮಪತ್ರಗಳನ್ನು ಹಿಂಪಡೆಯಲು ಎರಡು ನಿಮಿಷಗಳ ಕಾಲಾವಕಾಶ ನೀಡಲಾಯಿತು.

ಈ ಅವಧಿಯಲ್ಲಿ ಸ್ಥಾಯಿ ಸಮಿತಿಗಳಿಂದ ತಲಾ ಒಬ್ಬರು ಅಭ್ಯರ್ಥಿ ತಮ್ಮ ನಾಮಪತ್ರ ವಾಪಸ್ಸು ಪಡೆದ ಹಿನ್ನೆಲೆಯಲ್ಲಿ ೧೧ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ನಗರ ಯೋಜನೆ ಅಭಿವೃದ್ಧಿ ಸ್ಥಾಯಿ ಸಮಿತಿಗೆ ೧೧ ಸದಸ್ಯರು ನಾಮನಿರ್ದೇಶನ ಸಲ್ಲಿಸಿದ್ದು, ಎಲ್ಲಾ ಸದಸ್ಯರ  ನಾಮಪತ್ರಗಳು ಕ್ರಮಬದ್ದವಾಗಿದ್ದರಿಂದ ೧೧ ಸದಸ್ಯರನ್ನು  ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಬೃಹತ್ ಸಾರ್ವಜನಿಕ ಕಾಮಗಾರಿ ಸ್ಥಾಯಿ ಸಮಿತಿಗೆ ೧೧ ಸದಸ್ಯರ ಪೈಕಿ ೧೫ ಸದಸ್ಯರ ನಾಮಪತ್ರ ಸಲ್ಲಿಕೆಯಾಗಿ,  ಎಲ್ಲಾ ಸದಸ್ಯರ  ನಾಮಪತ್ರಗಳು ಕ್ರಮಬದ್ಧವಾಗಿದ್ದು, ೦೪ ಸದಸ್ಯರು ತಮ್ಮ ನಾಮಪತ್ರ ವಾಪಸ್ಸು ಪಡೆದ ಹಿನ್ನೆಲೆಯಲ್ಲಿ ೧೧ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. 

ಲೆಕ್ಕಪತ್ರ ಸ್ಥಾಯಿ ಸಮಿತಿಗೆ ೧೧ ಸದಸ್ಯರ ಪೈಕಿ ೧೦ ಸದಸ್ಯರು ಮಾತ್ರ ನಾಮನಿರ್ದೇಶನ ಸಲ್ಲಿಸಿದ್ದು, ಎಲ್ಲಾ ಸದಸ್ಯರ  ನಾಮಪತ್ರಗಳು ಕ್ರಮಬದ್ಧವಾಗಿದ್ದರಿಂದ  ೧೦ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಶಿಕ್ಷಣ ಸ್ಥಾಯಿ ಸಮಿತಿಗೆ ೧೧ ಸದಸ್ಯರ ಪೈಕಿ ೧೧ ಸದಸ್ಯರು ಮಾತ್ರ ನಾಮ ನಿರ್ದೇಶನ ಸಲ್ಲಿಸಿದ್ದು, ಎಲ್ಲಾ ಸದಸ್ಯರ  ನಾಮಪತ್ರಗಳು ಕ್ರಮಬದ್ಧವಾಗಿದ್ದರಿಂದ  ಅವಿರೋಧವಾಗಿ ಆಯ್ಕೆ ಮಾಡಲಾಯಿತು. 

ಸಾಮಾಜಿಕ ಸ್ಥಾಯಿ ಸಮಿತಿಗೆ ೧೧ ಸದಸ್ಯರ ಪೈಕಿ ೧೧ ಸದಸ್ಯರು ಮಾತ್ರ ನಾಮ ನಿರ್ದೇಶನ ಸಲ್ಲಿಸಿದ್ದು, ಎಲ್ಲಾ ಸದಸ್ಯರ  ನಾಮಪತ್ರಗಳು ಕ್ರಮಬದ್ಧವಾಗಿದ್ದರಿಂದ   ಅವಿರೋಧವಾಗಿ ಆಯ್ಕೆ ಮಾಡಲಾಯಿತು. 

12 ಸ್ಥಾಯಿ ಸಮಿತಿ ಅಧ್ಯಕ್ಷರ ಪಟ್ಟಿ.

1-ನಗರಯೋಜನೆ ಸ್ಥಾಯಿ ಸಮಿತಿ- ಅಶಾ ಸುರೇಶ್..

2-ಬೃಹತ್ ಕಾಮಗಾರಿ ಸ್ಥಾಯಿ ಸಮಿತಿ- ಮೋಹನ್ ಕುಮಾರ್.

3-ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ- ಹನುಮಂತಯ್ಯ.

4-ಲೆಕ್ಕಪತ್ರ ಸ್ಥಾಯಿ ಸಮಿತಿ- ಮಮತ ಶರವಣ.

5-ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ- ಎಲ್ ಶ್ರೀನಿವಾಸ್.

6-ಆರೋಗ್ಯ ಸ್ಥಾಯಿ ಸಮಿತಿ- ಮಂಜುನಾಥ ರಾಜು.

7-ಶಿಕ್ಷಣ ಸ್ಥಾಯಿ ಸಮಿತಿ- ಮಂಜುಳ ನಾರಾಯಣ ಸ್ವಾಮಿ

8-ಸಿಬ್ಬಂದಿ ಸುಧಾರಣೆ ಸ್ಥಾಯಿ ಸಮಿತಿ- ಅರುಣ ರವಿ.

9-ಅಪೀಲು ಸ್ಥಾಯಿ ಸಮಿತಿ- ಗುಂಡಣ್ಣ.

10-ತೋಟಗಾರಿಕೆ ಸ್ಥಾಯಿ ಸಮಿತಿ- ಉಮದೇವಿ.

11ಮಾರುಕಟ್ಟೆ  ಸ್ಥಾಯಿ ಸಮಿತಿ- ಪದ್ಮವತಿ.

12-ವಾರ್ಡ್ ಕಾಮಗಾರಿ ಸ್ಥಾಯಿ ಸಮಿತಿ- ಜಿ.ಕೆ ವೆಂಕಟೇಶ್.

ಈ ಸಂದರ್ಭದಲ್ಲಿ ಬಿಬಿಎಂಪಿ ಆಯುಕ್ತ ಅನಿಲ್‌ಕುಮಾರ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ, ಸಹಾಯಕ ಪ್ರಾದೇಶಿಕ ಆಯುಕ್ತರಾದ ವಿದ್ಯಾಕುಮಾರಿ ಉಪಸ್ಥಿತರಿದ್ದರು.