ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿಗೆ ಆಯ್ಕೆ

ಬ್ಯಾಡಗಿ04: ತಾಲೂಕಿನ ಹೆಡಿಗ್ಗೊಂಡ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೇಶವರಾವ್. ಜಿ. ಕುಲಕರ್ಣಿ  ಹಾಗೂ ಉಪಾಧ್ಯಕ್ಷರಾಗಿ ಯಲ್ಲಪ್ಪ ಏಚ್ ವಡ್ಡರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಪ್ರಕಾಶ ಹಿರಗೂಳಿ ತಿಳಿಸಿದ್ದಾರೆ. 

 ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ಇವರಿಬ್ಬರನ್ನು ಹೊರತು ಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದೇ ಇದ್ದ ಕಾರಣ ಚುನಾವಣಾಧಿಕಾರಿಗಳು ಇಬ್ಬರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ  ಸಿದ್ದಪ್ಪ ಅಂಬಲಿ ಹಾಗೂ ಇತರರು ಹಾಜರಿದ್ದರು.