ಎಸ್‌ಸಿ, ಎಸ್‌ಟಿ ಜಾಗೃತಿ ಸಮಿತಿ ಸದಸ್ಯರ ಆಯ್ಕೆ: ಮರೆಣ್ಣನವರ ಆಕ್ರೋಶ
Selection of SC, ST Awareness Committee members: Marenna's outrage
ಹಾವೇರಿ 07 : ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಮೇಲಿನ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರ ಆಯ್ಕೆ ಮಾಡಲಾಗಿದ್ದು,ಈ ಸಮಿತಿಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು, ಕಾಂಗ್ರೆಸ್ ಮುಖಂಡರನ್ನು ನೇಮಕ ಮಾಡುವ ಮೂಲಕ ಎಸ್‌ಸಿ-ಎಸ್ಟಿ ದೌರ್ಜನ್ಯ ಸಮಿತಿಯನ್ನು ಕಾಂಗ್ರೆಸ್ಸಿಗರ ಸಮಿತಿಯನ್ನಾಗಿ ಮಾಡಿದ್ದಾರೆಂದು ಎಬಿಎಸ್‌ಪಿ ಜಿಲ್ಲಾಧ್ಯಕ್ಷ ಅಶೋಕ ಮರೆಣ್ಣನವರ ತೀವೃ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಸಮಿತಿಗೆ ಸದಸ್ಯರನ್ನು ಆಯ್ಕೆಮಾಡಲೆಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯವತಿಯಿಂದ ಅರ್ಜಿಗಳನ್ನು ಕರೆಯಲಾಗಿತ್ತು. ಸಮಿತಿಗೆ ಸದಸ್ಯರಾಗಲು ಕಳೆದ ಮೂರು ದಶಕದಿಂದ ದಲಿತರ ಮೇಲಿನ ಶೋಷಣೆಗಳನ್ನು ತಡೆಗಟ್ಟಲು, ದಲಿತ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರುವ ಅನೇಕರು ಅರ್ಜಿ ಸಲ್ಲಿಸಿದ್ದರೂ ಸಹ ಅಂತವರನ್ನು ಜಿಲ್ಲಾಧಿಕಾರಿಗಳು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಯ ಕಡೆಗಣಿಸಿದ್ದು ಬಹಳ ನೋವನ್ನುಂಟು ಮಾಡಿದೆ. ಈಗಾಗಲೇ ಹಿಂದಿನ ಬಾರಿ ಎಸ್‌ಸಿ-ಎಸ್ಟಿ ದೌರ್ಜನ್ಯ ಸಮಿತಿ ಸದಸ್ಯರಾಗಿದ್ದವರನ್ನೇ ಮತ್ತೆ ಸಮಿತಿಗೆ ನೇಮಕ ಮಾಡಲಾಗಿದೆ.ಜೊತೆಗೆ ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ದೊಡ್ಡ ಹುದ್ದೆಯಲ್ಲಿರುವ ಪದಾಧಿಕಾರಿಗಳನ್ನು ಎಸ್‌ಸಿ-ಎಸ್ಟಿ ದೌರ್ಜನ್ಯ ಸಮಿತಿಗೆ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಕಾಂಗ್ರೆಸ್ ಶಾಸಕರು,ಉಸ್ತುವಾರಿ ಸಚಿವರು ನೀಡಿರುವ ವ್ಯಕ್ತಿಗಳ ಹೆಸರುಗಳನ್ನು ಅಂತಿಮಗೊಳಿಸಿ ಕಾಂಗ್ರೆಸ್ ಪಕ್ಷದ ಮುಖಂಡರನ್ನು ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಿರುವ ಜಿಲ್ಲಾಧಿಕಾರಿಗಳ ನಡೆಯನ್ನು ನಾವು ಒಪ್ಪುವುದಿಲ್ಲ. ತಕ್ಷಣವೇ ಈ ಆಯ್ಕೆಯನ್ನು ರದ್ದು ಪಡಿಸಿ,ಈ ಹಿಂದೆ ಸಲ್ಲಿಸಿರುವ ಅರ್ಜಿಗಳನ್ನು ಮರು ಪರೀಶೀಲನೆ ಮಾಡಿ ಅರ್ಹರನ್ನು ಎಸ್‌ಸಿ-ಎಸ್ಟಿ ದೌರ್ಜನ್ಯ ಸಮಿತಿಗೆ ಸದಸ್ಯರನ್ನು ನೇಮಕ ಮಾಡುವಂತೆ ಅಶೋಕ ಮರೆಣ್ಣನವರ ಆಗ್ರಹಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 