ಕರ್ನಾಟಕ ಮಾದರ ಮಹಾಸಭಾ ತಾಲೂಕು ಪದಾಧಿಕಾರಿಗಳ ಆಯ್ಕೆ
Selection of Taluk Office-Bearers for the 'Karnataka Model' Mahasabha
ಹೂವಿನಹಡಗಲಿ 17: ಕರ್ನಾಟಕ ಮಾದರ ಮಹಾಸಭಾ ತಾಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ತಾಲೂಕು ಅಧ್ಯಕ್ಷರಾಗಿ ಕೆ. ಉಚ್ಚಂಗೆಪ್ಪ, ಉಪಾಧ್ಯಕ್ಷರಾಗಿ ಪಿ. ನಿಂಗಪ್ಪ, ಕಾರ್ಯದರ್ಶಿಯಾಗಿ ಸಿ. ದುರುಗೇಶ, ಖಜಾಂಚಿಯಾಗಿ ಟಿ. ದೇವೇಂದ್ರ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೆ. ಶಂಭು, ಎ. ಭರಮಪ್ಪ, ಡಿ. ಮರಿಯಪ್ಪ, ಬಿ. ಆನಂದ, ಕೆ. ಲಲಿತಮ್ಮ ಅವರನ್ನು ನೇಮಕ ಮಾಡಲಾಗಿದೆ. ವಿಶೇಷ ಆಹ್ವಾನಿತರಾಗಿ ಎಸ್. ನಿಂಗರಾಜ, ನಾಗರಾಜಪ್ಪ, ಕೆ. ಹನುಮಂತಪ್ಪ, ಎಚ್. ಗೋಣೆಪ್ಪ, ಎಸ್. ಎಲ್ಲಪ್ಪ ಹಾಗೂ ಎಂ. ಹನುಮಂತಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಕುರಿತು ಮಾತನಾಡಿದ ತಾಲೂಕು ಅಧ್ಯಕ್ಷ ಕೆ. ಉಚ್ಚಂಗೆಪ್ಪ ಅವರು, ರಾಜ್ಯಾಧ್ಯಕ್ಷ ಡಾ. ಕೆ.ಎಚ್. ಮುನಿಯಪ್ಪ ಅವರ ಆದೇಶದ ಮೇರೆಗೆ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಸಂಘಟನೆಯ ಮೂಲಕ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 