ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘಕ್ಕೆ ನೂತನ ಜಿಲ್ಲಾ ಪದಾಧಿಕಾರಿಗಳ ಆಯ್ಕೆ
Selection of new district office-bearers for the Karnataka State Municipal Employees' Association
ಮುದ್ದೇಬಿಹಾಳ 5: ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ನೂತನ ಜಿಲ್ಲಾ ಅಧ್ಯಕ್ಷರಾಗಿ ಭೀಮಾಶಂಕರ ಕಾಂಬಳೆ ಹಾಗೂ ಜಿಲ್ಲಾ ಉಪಾಧ್ಯಕ್ಷರಾಗಿ ಶ್ರೀಕಾಂತ ಪಟ್ಟಣಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.
ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಸಂಘದ ಬೈಲಾ ನಿಯಮಾವಳಿಗಳಂತೆ ಬೆಳಗಾವಿ ವಿಭಾಗೀಯ ಪದಾಧಿಕಾರಿಗಳ ಸಮ್ಮುಖದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸಭೆಯಲ್ಲಿ ಸರ್ವಾನುಮತದಿಂದ ಜಿಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ರಾಜ್ಯ ಹಾಗೂ ಬೆಳಗಾವಿ ವಿಭಾಗೀಯ ಪದಾಧಿಕಾರಿಗಳು, ಕೊಲ್ಹಾರ, ನಿಡಗುಂದಿ, ಮುದ್ದೇಬಿಹಾಳ, ಮನಗೂಳಿ ಸೇರಿದಂತೆ ವಿವಿಧ ಪುರಸಭೆಗಳ ಪದಾಧಿಕಾರಿಗಳು ಹಾಗೂ ಪೌರ ಕಾರ್ಮಿಕರು ಉಪಸ್ಥಿತರಿದ್ದರು ಎಂದು ನೂತನ ಜಿಲ್ಲಾ ಉಪಾಧ್ಯಕ್ಷ ಶ್ರೀಕಾಂತ ಪಟ್ಟಣಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೋಟೊ ಶೀರ್ಷಿಕೆ: ವಿಜಯಪುರದಲ್ಲಿ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ನೂತನ ಜಿಲ್ಲಾ ಅಧ್ಯಕ್ಷ ಭೀಮಾಶಂಕರ ಕಾಂಬಳೆ ಹಾಗೂ ಜಿಲ್ಲಾ ಉಪಾಧ್ಯಕ್ಷ ಶ್ರೀಕಾಂತ ಪಟ್ಟಣಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 