ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘಕ್ಕೆ ನೂತನ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘಕ್ಕೆ ನೂತನ ಜಿಲ್ಲಾ ಪದಾಧಿಕಾರಿಗಳ ಆಯ್ಕೆ  Selection of new district office-bearers for the Karnataka State Municipal Employees' Association

ಮುದ್ದೇಬಿಹಾಳ 5: ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ನೂತನ ಜಿಲ್ಲಾ ಅಧ್ಯಕ್ಷರಾಗಿ ಭೀಮಾಶಂಕರ ಕಾಂಬಳೆ ಹಾಗೂ ಜಿಲ್ಲಾ ಉಪಾಧ್ಯಕ್ಷರಾಗಿ ಶ್ರೀಕಾಂತ ಪಟ್ಟಣಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.  

ಪಟ್ಟಣದ ಡಾ. ಬಿ.ಆರ್‌. ಅಂಬೇಡ್ಕರ್ ಸಮುದಾಯ ಭವನದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಸಂಘದ ಬೈಲಾ ನಿಯಮಾವಳಿಗಳಂತೆ ಬೆಳಗಾವಿ ವಿಭಾಗೀಯ ಪದಾಧಿಕಾರಿಗಳ ಸಮ್ಮುಖದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸಭೆಯಲ್ಲಿ ಸರ್ವಾನುಮತದಿಂದ ಜಿಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.  

ಸಭೆಯಲ್ಲಿ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ರಾಜ್ಯ ಹಾಗೂ ಬೆಳಗಾವಿ ವಿಭಾಗೀಯ ಪದಾಧಿಕಾರಿಗಳು, ಕೊಲ್ಹಾರ, ನಿಡಗುಂದಿ, ಮುದ್ದೇಬಿಹಾಳ, ಮನಗೂಳಿ ಸೇರಿದಂತೆ ವಿವಿಧ ಪುರಸಭೆಗಳ ಪದಾಧಿಕಾರಿಗಳು ಹಾಗೂ ಪೌರ ಕಾರ್ಮಿಕರು ಉಪಸ್ಥಿತರಿದ್ದರು ಎಂದು ನೂತನ ಜಿಲ್ಲಾ ಉಪಾಧ್ಯಕ್ಷ ಶ್ರೀಕಾಂತ ಪಟ್ಟಣಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಫೋಟೊ ಶೀರ್ಷಿಕೆ: ವಿಜಯಪುರದಲ್ಲಿ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ನೂತನ ಜಿಲ್ಲಾ ಅಧ್ಯಕ್ಷ ಭೀಮಾಶಂಕರ ಕಾಂಬಳೆ ಹಾಗೂ ಜಿಲ್ಲಾ ಉಪಾಧ್ಯಕ್ಷ ಶ್ರೀಕಾಂತ ಪಟ್ಟಣಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.