ಪತ್ರಕರ್ತರ ಧ್ವನಿ ಸಂಘಟನೆಯ ತಾಲೂಕಾ ನೂತನ ಪದಾಧಿಕಾರಿಗಳ ಆಯ್ಕೆ
ಸವಣೂರ 22 ; ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ತಾಲೂಕಾ ನೂತನ ಪದಾಧಿಕಾರಿಗಳ ಆಯ್ಕೆ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅಧ್ಯಕ್ಷತೆಯಲ್ಲಿ ನಡೆಯಿತು.
ತಾಲೂಕಾ ನೂತನ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ತಾಲೂಕಾ ಅಧ್ಯಕ್ಷರನ್ನಾಗಿ ಪ್ರಶಾಂತ ಮುಗಳೆ,ಉಪಾಧ್ಯಕ್ಷರಾಗಿ ಗಂಗಪ್ಪ ಹರಿಜನ,ಮನೋಜ ದೊಡ್ಮನಿ, ಪ್ರ.ಕಾರ್ಯದರ್ಶಿಯಾಗಿ ರವಿಚಂದ್ರ ಮೈದೂರ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಮುನ್ನಾ ಗೌಡಗೇರಿ, ನಾಗರಾಜ, ಇಬ್ರಾಹಿಂ, ಸಾಜಿದ್ ಖಾನ್ ಅವರನ್ನು ಆಯ್ಕೆ ಮಾಡಿ ಆದೇಶಿಸಲಾಯಿತು.ಈ ಸಂದರ್ಭದಲ್ಲಿ ಉಪಾಧ್ಯಕ್ಷ ಎಸ್.ಎಸ್.ಪಾಟೀಲ,ಜಿಲ್ಲಾಧ್ಯಕ್ಷ ಬಸವಂತಪ್ಪ ಹುಲ್ಲತ್ತಿ, ಡಿ.ಎಂ.ಬುರಡಿ ಸೇರಿದಂತೆ ಇತರರಿದ್ದರು.