ವಾರ್ತಾ ಇಲಾಖೆಯಿಂದ ಬೀದಿನಾಟಕ-ಜಾನಪದ ಕಲಾ ತಂಡಗಳ ಆಯ್ಕೆ
Selection of street theatre and folk art troupes by the Information Department
ವಿಜಯಪುರ ಆಗಸ್ಟ್ 12: ಸರ್ಕಾರ ಜಾರಿಗೊಳಿಸಿರುವ ಪಂಚಗ್ಯಾರಂಟಿ ಯೋಜನೆಗಳು ಹಾಗೂ ಸರ್ಕಾರದ ಜನಪ್ರಿಯ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಮತ್ತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಂಗಳವಾರ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಆವರಣದಲ್ಲಿ ವಾರ್ತಾ ಇಲಾಖೆಯಿಂದ ಬೀದಿ ನಾಟಕ ಹಾಗೂ ಜಾನಪದ ಕಲಾ ತಂಡಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಕಲಾವಿದರನ್ನು ಉದ್ದೇಶಿಸಿ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕರಾದ ಶಿವನಗೌಡ ಪಾಟೀಲ ಅವರು, ಸರ್ಕಾರದ ಪಂಚ ಗ್ಯಾರಂಟಿಗಳ ಯೋಜನೆ ಮತ್ತು ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಹಾಗೂ ಮನವರಿಕೆ ಮಾಡಿಕೊಡುವಲ್ಲಿ ಬೀದಿ ನಾಟಕ ಹಾಗೂ ಜಾನಪದ ಕಲಾತಂಡಗಳ ಪಾತ್ರ ಬಹುಮುಖ್ಯವಾಗಿದೆ. ಸರ್ಕಾರ ಮತ್ತು ಸಾರ್ವಜನಿಕರ ಮಧ್ಯೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ. ಇದರ ಭಾಗವಾಗಿಯೇ ವಿವಿಧ ಕಲಾ ತಂಡಗಳನ್ನು ಆಯ್ಕೆ ಮಾಡಿ, ಸರ್ಕಾರದ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಹಮ್ಮಿಕೊಂಡ ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಎಲ್ಲ ಕಲಾ ತಂಡಗಳು ಕಲೆಯೊಂದಿಗೆ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ತಮ್ಮದೇ ಆದ ವಿಶಿಷ್ಟ ಶೈಲಿಯ ಕಲೆ ಅಭಿವ್ಯಕ್ತಪಡಿಸುವ ಮೂಲಕ ಜನರಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ತಮ್ಮ ಅತ್ಯದ್ಭುತ ಕಲೆಯ ಮೂಲಕ ಸಾರ್ವಜನಿಕರಿಗೆ ತಲುಪಿಸುವ ಕಾರ್ಯ ಕಲಾ ತಂಡಗಳು ನಿರ್ವಹಿಸಲಿವೆ. ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ಯೋಜನೆಗಳನ್ನು ಯಥಾವತ್ತಾಗಿ ತಲುಪಿಸಲು ಸಂವಹನ ಮಾಧ್ಯಮವಾಗಿ ಬೀದಿನಾಟಕ ಮತ್ತು ಜಾನಪದ ಕಲಾತಂಡಗಳು ತಮ್ಮ ವಿಶಿಷ್ಟವಾದ ಕಲಾ ಶೈಲಿಯಿಂದ ಜನರಿಗೆ ಮನಮುಟ್ಟುವಂತೆ ಪ್ರದರ್ಶನ ನೀಡಿ, ಸರ್ಕಾರದ ಯೋಜನೆಗಳ ಲಾಭ ಹೆಚ್ಚಿನ ಜನರು ಪಡೆದುಕೊಳ್ಳುವಂತಾಗಲು ಕಲಾ ತಂಡಗಳು ಕಲಾ ಪ್ರದರ್ಶನ ನೀಡಲಿ ಎಂದು ಆಶೀಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಅವರು ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಇಲಾಖೆಯಿಂದ ಬೀದಿ ನಾಟಕ ಹಾಗೂ ಜಾನಪದ ಕಲಾ ತಂಡಗಳನ್ನು ಆಯ್ಕೆ ಮಾಡಿ, ಆಯ್ಕೆಯಾದ ಕಲಾ ತಂಡಗಳು ಜಿಲ್ಲೆಯ ವಿವಿಧೆಡೆ ಸಂಚರಿಸಿ, ಬೀದಿ ನಾಟಕ ಹಾಗೂ ಜಾನಪದ ಸಂಗೀತದ ಮೂಲಕ ಸರ್ಕಾರದ ಯೋಜನೆಗಳ ಮಾಹಿತಿ ನೀಡಲಿವೆ.
ಈ ಆಯ್ಕೆ ಪ್ರಕ್ರಿಯೆಯಲ್ಲಿ ಬೀದಿ ನಾಟಕ ತಂಡಗಳಾದ ಗ್ರಾಮ ಸೇವಾ ಟ್ರಸ್ಟ್, ಮೂಕ ನಾಯಕ ಸೇವಾ ಸಂಸ್ಥೆ, ವಿಶ್ವಚೇತನ ಕಲಾ ತಂಡ, ಗ್ರಾಮೀಣ ಅಭಿವೃದ್ದಿ ಸಂಸ್ಥೆ, ಅರುಣೋದಯ ಸಂಸ್ಥೆ, ಮಾದೇವಿ ಸೇವಾ ಸಂಘ, ಜಟ್ಟಿಂಗರಾಯ ಸಾಯಿ ಕಲಾ ತಂಡ ಹಾಗೂ ಗುರುಪ್ರಸಾದ ಜಾನಪದ ಕಲಾ ತಂಡ, ಮೂಕ ನಾಯಕ ಸೇವಾ ಸಂಸ್ಥೆ ಹಾಗೂ ಪ್ರೇರಣಾ ಗ್ರಾಮೀಣಾಭಿವೃದ್ಧಿ ಜಾನಪದ ಕಲಾ ತಂಡಗಳು ಭಾಗವಹಿಸಿ ಸರ್ಕಾರದ ಯೋಜನೆಗಳ ಕುರಿತು ಪ್ರದರ್ಶನ ನೀಡಿದರೆಂದು ಅವರು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ.ಕೋಲೂರ, ಬೆಳಗಾವಿಯ ವಿಭಾಗೀಯ ಸಹ ನಿರ್ದೇಶಕರ ಕಚೇರಿಯ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀಕ್ಷಕರಾದ ಶ್ರೀಮತಿ ಶ್ರೀದೇವಿ ಹಲಸಂಗಿ, ಸಮಾಜ ಕಲ್ಯಾಣ ಇಲಾಖೆಯ ಎಂ.ಎಲ್.ಮನ್ನಾಭಾಯಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾದ ಮಂಜುಳಾ ದುರಗನ್ನವರ, ಸುರೇಶ ಅಂಬಿಗೇರ, ವೈಷ್ಣವಿ, ಪ್ರಶಿಕ್ಷಣಾರ್ಥಿ ವಿದ್ಯಾಶ್ರೀ ಹೊಸಮನಿ, ಪ್ರಕಾಶ ಘಟಕಾಂಬ್ಳೆ, ಸಾಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಬೀದಿ ನಾಟಕ ಕಲಾ ತಂಡ ಹಾಗೂ ಜಾನಪದ ಕಲಾ ತಂಡಗಳ ಕಲಾವಿದರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 