ತೋಟಗಾರಿಕೆಯಲ್ಲಿ ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮ
ಹಾವೇರಿ18: ತೋಟಗಾರಿಕೆಯಲ್ಲಿ ಪುಷ್ಪ ಕೃಷಿ, ತರಕಾರಿ ಬೀಜೋತ್ಪಾದನೆ ಹಾಗೂ ಕೊಯ್ಲೋತ್ತರ ತಂತ್ರಜ್ಞಾನವು ಸಣ್ಣ ಹಿಡುವಳಿದಾರರಿಗೆ ವರದಾನವಾಗಿದೆ ಎಂದು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹಾಗೂ ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ ಮುಖ್ಯಸ್ಥರಾದ ಡಾ.ಪ್ರಭುದೇವ ಅಜ್ಜಪ್ಪಳವರ ಹೇಳಿದರು.
ಶನಿವಾರ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟ, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ ದೇವಿಹೊಸೂರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಯುಕ್ತ ಆಶ್ರಯದಲ್ಲಿ ನೆಲೊಗಲ್, ಮೋಟೆಬೆನ್ನೂರ ಮತ್ತು ಗುಂಡೇನಹಳ್ಳಿ ಗ್ರಾಮದ ರೈತ ಮತ್ತು ರೈತ ಮಹಿಳೆಯರಿಗೆ ದೇವಿಹೊಸೂರ ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ ಆಯೋಜಿಸಲಾದ ತೋಟಗಾರಿಕೆಯಲ್ಲಿ ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಈ ಚಟುವಟಿಕೆಗಳೊಂದಿಗೆ ಜೇನು ಕೃಷಿ, ಎರೆಹುಳು ಗೊಬ್ಬರ ತಯಾರಿಕೆ ಮತ್ತು ಹೈನುಗಾರಿಕೆಯನ್ನು ಅಳವಡಿಸಿಕೊಂಡು ಪ್ರಮುಖವಾಗಿ ಸ್ತ್ರೀಯರು ಸ್ವ ಉದ್ಯಮಿಗಳಾಗಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಿಭಿವೃದ್ಧಿ ಯೋಜನೆ ಪ್ರತಿನಿಧಿ ಮಹಾಲಿಂಗಯ್ಯ, ಪ್ರಗತಿಪರ ರೈತರು ಮತ್ತು ರೈತ ಮಹಿಳೆಯರು ಪಾಲ್ಗೊಂಡಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 