ಆತ್ಮವಿಶ್ವಾಸ ಮತ್ತು ಉತ್ತಮ ನಾಯಕತ್ವ ಜೀವನದಲ್ಲಿ ಯಶಸ್ಸಿಗೆ ದಾರಿ : ಜಿ.ಶ್ರೀನಯ್ಯ
Self-confidence and good leadership are the keys to success in life: G. Srinaya
ಲೋಕದರ್ಶನ ವರದಿ
ಕೊಪ್ಪಳ 16: ಆತ್ಮವಿಶ್ವಾಸ ಮತ್ತು ಉತ್ತಮ ನಾಯಕತ್ವ ಜೀವನದಲ್ಲಿ ಯಶಸ್ಸಿಗೆ ದಾರಿ ಮಾಡಿಕೊಡುತ್ತದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ಜಿ.ಶ್ರೀನಯ್ಯ ಅವರು ತಿಳಿಸಿದರು. ಕರ್ನಾಟಕ ಆರೋಗ್ಯ ಸಂವರ್ಧನಾ ಪ್ರತಿಷ್ಠಾನ (ಕೆ.ಹೆಚ್.ಪಿ.ಟಿ) ವತಿಯಿಂದ ಕೊಪ್ಪಳ ತಾಲ್ಲೂಕಿನ ಟಣಕನಕಲ್ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ಶಾಲೆಯಲ್ಲಿ ಶುಕ್ರವಾರ ಜರುಗಿದ “ಹದಿಹರೆಯದ ಹೆಣ್ಣುಮಕ್ಕಳ ನಾಯಕತ್ವ ಮತ್ತು ಸಂವಹನ ಶಿಬಿರದಲ್ಲಿ ಹೆಣ್ಣು ಮಕ್ಕಳ ಸಂವಾದ ಉದ್ದೇಶಿಸಿ ಅವರು ಮಾತನಾಡಿದರು. ಬಸ್ ಪ್ರಯಾಣದ ವೇಳೆ ಹೆಣ್ಣುಮಕ್ಕಳು ಎದುರಿಸುವ ತೊಂದರೆಗಳು, ಮಕ್ಕಳ ಸುರಕ್ಷತೆ ಬಗ್ಗೆ ಯಾವುದೇ ಸಮಸ್ಯೆ ಎದುರಾದರೂ ಧೈರ್ಯವಾಗಿ ತಿಳಿಸಬೇಕು. ಅವುಗಳ ಪರಿಹಾರಕ್ಕೆ ನಿಗಮದ ವತಿಯಿಂದ ಅಗತ್ಯ ಸಹಕಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಸಿಂಧೂ ಅಂಗಡಿ ಶಿಬಿರ ಉದ್ಘಾಟಿಸಿ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಣ್ಣುಮಕ್ಕಳು ಶಿಕ್ಷಣದ ಜೊತೆಗೆ ನಾಯಕತ್ವ ಹಾಗೂ ಪರಿಣಾಮಕಾರಿ ಸಂವಹನ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪ್ರೊಬೇಷನ್ ಅಧಿಕಾರಿ ಶಿವಲೀಲಾ ವನ್ನೂರ್ ಮಾತನಾಡಿ ಪೋಕ್ಸೋ ಕಾಯ್ದೆ ಹಾಗೂ ಹೆಣ್ಣುಮಕ್ಕಳ ಹಕ್ಕುಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಆರ್.ಕೆ.ಎಸ್.ಕೆ ಜಿಲ್ಲಾ ಸಂಯೋಜಕ ಮೆಹಬೂಬ್, ಮಕ್ಕಳ ರಕ್ಷಣಾ ಘಟಕ ಸಂಯೋಜಕ ರವಿ, ಕೆ.ಹೆಚ್.ಪಿ.ಟಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕಿ ಉಮಾರೆಡ್ಡಿ, ತಾಲ್ಲೂಕು ಹಾಗೂ ವಲಯ ಸಂಯೋಜಕರು, ಸಮುದಾಯ ಸಂಘಟಕಿಯರು ಮತ್ತು ಸ್ಪೂರ್ತಿ ಹೆಣ್ಣುಮಕ್ಕಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಲಕ್ಷ್ಮಿ ನಿರೂಪಿಸಿ ವಂದಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 