ಹೊಸದಿಗಂತ ಪದವಿ ಶಿಕ್ಷಣಕ್ಕೆ ಆತ್ಮವಿಶ್ವಾಸವೇ ಬುನಾದಿ: ಸುಧೀರ್ ಕೊಳ್ಳಳ್ಳಿ
Self-confidence is the foundation of degree education: Sudhir Kolhalli
ಯಲಬುರ್ಗಾ, ಆ.29: ಹೊಸ ಶೈಕ್ಷಣಿಕ ಹಂತಕ್ಕೆ ಕಾಲಿಡುತ್ತಿರುವ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ತಮ್ಮ ಗುರಿಯತ್ತ ಮುನ್ನಡೆಯಬೇಕು. ಉತ್ತಮ ಶಿಕ್ಷಣದ ಜೊತೆಗೆ ಶಿಸ್ತು, ಸಂಸ್ಕಾರ ಹಾಗೂ ವಿವಿಧ ಕೌಶಲಗಳನ್ನು ಬೆಳೆಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಿಡಿಸಿ ಉಪಾಧ್ಯಕ್ಷ ಸುಧೀರ್ ಕೊಳ್ಳಳ್ಳಿ ಹೇಳಿದರು.
ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನವಾಗಿ ಪದವಿ ಶಿಕ್ಷಣಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘ಹೊಸದಿಗಂತ ಪದವಿ ಶಿಕ್ಷಣಕ್ಕೆ ಆತ್ಮವಿಶ್ವಾಸದ ಆರಂಭ’ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪದವಿ ಶಿಕ್ಷಣವು ಕೇವಲ ಅಂಕ ಗಳಿಸುವುದಕ್ಕೆ ಸೀಮಿತವಾಗದೆ, ಉತ್ತಮ ವ್ಯಕ್ತಿತ್ವ ಹಾಗೂ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವ ಹಂತವಾಗಬೇಕು. ವಿದ್ಯಾರ್ಥಿಗಳು ಕಾಲೇಜಿನಲ್ಲಿರುವ ಶೈಕ್ಷಣಿಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು, ಅಧ್ಯಾಪಕರ ಮಾರ್ಗದರ್ಶನದಲ್ಲಿ ತಮ್ಮ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾಲೇಜಿನ ಪ್ರಾಚಾರ್ಯ ಅಶೋಕ ಕೆಂಚರಡ್ಡಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳು, ನಿಯಮಗಳು ಹಾಗೂ ಲಭ್ಯವಿರುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಇದೇ ವೇಳೆ ಹೊಸ ಶೈಕ್ಷಣಿಕ ಬದುಕಿಗೆ ಕಾಲಿಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಪತ್ರಕರ್ತ ಮಾಂತೇಶ ಚಲವಾದಿ, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 