ಜಿಲ್ಲಾಧಿಕಾರಿಗಳಿಂದ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿ
Self-enumeration registration through mobile by District Collectors
ಲೋಕದರ್ಶನ ವರದಿ
ಕಾರವಾರ 01: ಕೇಂದ್ರ ಸರ್ಕಾರವು ಜನಗಣತಿ 2027ರ ಅಂಗವಾಗಿ ಸ್ವಯಂ ಗಣತಿ ವ್ಯವಸ್ಥೆಯನ್ನು ಪರಿಚಯಿಸಿದ್ದು, ಬುಧವಾರ ಜಿಲ್ಲಾಧಿಕಾರಿ ಅವರು ತಮ್ಮ ಮೊಬೈಲ್ ಮೂಲಕ ತಮ್ಮ ಸ್ವಯಂ ಗಣತಿ ದಾಖಲಾತಿಯನ್ನು ಪೂರ್ಣಗೊಳಿಸುವ ಮೂಲಕ ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳೂ ಕೂಡಾ ಸ್ವಯಂ ಗಣತಿ ಮಾಡಿಕೊಳ್ಳಲು ಪ್ರೇರಣೆ ನೀಡಿದರು.
ನಮ್ಮ ಜನಗಣತಿ- ನಮ್ಮ ಅಭಿವೃದ್ಧಿ ಎಂಬ ಧ್ಯೇಯ ವಾಕ್ಯದೊಂದಿಗೆ ಸರ್ಕಾರ ಜನಗಣತಿ 2027 ನ್ನು ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಸರ್ಕಾರ ಸ್ವಯಂ ಗಣತಿ ವ್ಯವಸ್ಥೆಯನ್ನು ಪರಿಚಯಿಸಿದೆ. 2026 ರ ಏಪ್ರಿಲ್ 1 ರಿಂದ 15 ರವರೆಗೆ ಜಿಲ್ಲೆಯ ಎಲ್ಲಾ ನಾಗರಿಕರು ಅಧಿಕೃತ ಪೋರ್ಟಲ್ ಜ.ಛಿಜಠಿ.ರಠ.ಟಿ ಮೂಲಕ ತಮ್ಮ ಮಾಹಿತಿಯನ್ನು ಆನೈನ್ ನಲ್ಲಿ ದಾಖಲಿಸಿಕೊಳ್ಳಬಹುದಾಗಿದ್ದು, ಈ ಪ್ರಕ್ರಿಯೆಯು ಅತ್ಯಂತ ಸರಳ ಮತ್ತು ಸುರಕ್ಷಿತವಾಗಿದೆ ಎಂದು ತಿಳಿಸಿದರು.
ಮೊಬೈಲ್ ಸಂಖ್ಯೆ ಮತ್ತು ಓಖಿಕ ಮೂಲಕ ಸುಲಭವಾಗಿ 5 ರಿಂದ 10 ನಿಮಿಷಢಗಳಲ್ಲಿ ಸ್ವಯಂ ಗಣತಿ ಪೂರ್ಣಗೊಳಿಸಬಹುದಾಗಿದ್ದು, ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ನಿಮ್ಮ ಅರ್ಜಿಯ ಸಂಖ್ಯೆ ದೊರೆಯುವುದು. ಈ ಸಂಖ್ಯೆಯನ್ನು ಏಪ್ರಿಲ್ 16 ರಿಂದ ಮೇ 15 ರವರೆಗೆ ಮನೆಮನೆಗೆ ಭೇಟಿ ನೀಡುವ ಗಣತಿದಾರರಿಗೆ ನೀಡಿದಲ್ಲಿ, ಗಣತಿದಾರರು ಅತೀ ಕಡಿಮೆ ಸಮಯದಲ್ಲಿ ಗಣತಿ ಪೂರ್ಣಗೊಳಿಸಲು ಸಾಧ್ಯವಾಗಲಿದೆ ಎಂದರು.
ಜಿಲ್ಲಾಧಿಕಾರಿಗಳು ತಮ್ಮ ಸ್ವಯಂ ಗಣತಿಯ ಮಾಹಿತಿಯನ್ನು ಜಿಲ್ಲಾ ಮಟ್ಟದ ಅಧಿಕಾರಿಗಳ ವಾಟ್ಸಾಪ್ ಗ್ರೂಪ್ ನಲ್ಲಿ ಹಂಚಿಕೊಂಡ ಕೂಡಲೇ ಜಿಲ್ಲಾ ಮತ್ತು ತಾಲೂಕು ಮಟ್ಟದ ಹಲವು ಅಧಿಕಾರಿಗಳು ತಾವೂ ಕೂಡಾ ಸ್ವಯಂ ಗಣತಿ ಪ್ರಕ್ರಿಯೆಯಲ್ಲಿ ಉತ್ಸಾಹದಿಂದ ಭಾಗವಹಿಸಿ, ಸ್ವಯಂ ಗಣತಿ ಪೂರ್ಣಗೊಂಡ ತಮ್ಮ ಮಾಹಿತಿಯನ್ನು ಹಂಚಿಕೊಳ್ಳುವ ಮೂಲಕ ಜಿಲ್ಲಾಧಿಕಾರಿಗಳ ಮಾದರಿ ನಡೆಯನ್ನು ಅನುಸರಿಸಿದ್ದು ಮಾತ್ರವಲ್ಲದೇ ತಮ್ಮ ಅಧೀನ ಸಿಬ್ಬಂದಿಗೆ ಪ್ರೇರಣೆ ನೀಡಿದರು.
ಜನಗಣತಿ ನಮ್ಮ ರಾಜ್ಯ ಮತ್ತು ದೇಶದ ಭವಿಷ್ಯ ರೂಪಿಸುವ ಮಹತ್ವದ ಕಾರ್ಯವಾಗಿದ್ದು, ಇದು ದತ್ತಾಂಶ ಆಧಾರಿತ ನಿರ್ಧಾರಗಳಿಗೆ ಸಹಾಯ ಮಾಡುತ್ತದೆ. ಆರೋಗ್ಯ, ಶಿಕ್ಷಣ, ವಸತಿ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಮರ್ಕ ಸಂಪನ್ಮೂಲ ಹಂಚಿಕೆಗೆ ದಾರಿ ತೋರುತ್ತದೆ. ಜನಗಣತಿಯಲ್ಲಿ ನಮ್ಮ ಭಾಗವಹಿಸುವಿಕೆ ಅತ್ಯಂತ ಮುಖ್ಯವಾಗಿದ್ದು, ಇಂದು ನಾವು ನೀಡುವ ನಿಖರ ಮಾಹಿತಿಯು, ನಾಳೆಯ ಉತ್ತಮ ನೀತಿಗಳು ಮತ್ತು ಸೇವೆಗಳಿಗೆ ಆಧಾರವಾಗುತ್ತದೆ. ಜನಗಣತಿಯಿಂದ ಯಾರು ಬಿಟ್ಟು ಹೋಗದಂತೆ ಸರ್ಕಾರ ಮುತುವರ್ಜಿ ವಹಿಸಿದೆ. ನಿಗದಿತ ಅವಧಿಯಲ್ಲಿ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ, ಜಿಲ್ಲೆಯಲ್ಲಿ ಜನಗಣತಿ 2027 ಅನ್ನು ಯಶಸ್ವಿಗೊಳಿಸಲು ನಾವೆಲ್ಲರೂ ಕೈ ಜೋಡಿಸೋಣ ಎಂದು ಜಿಲ್ಲಾಧಿಕಾರಿಗಳು ಜಿಲ್ಲೆಯ ನಾಗರಿಕರಲ್ಲಿ ಮನವಿ ಮಾಡಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 