ನವದೆಹಲಿ, ಮೇ 13,ಬರುವ ಜೂನ್ ಒಂದರಿಂದ ದೇಶೀಯವಾಗಿ ತಯಾರಿಸಿದ ಉತ್ಪನ್ನಗಳನ್ನು ಸಂಸತ್ , ಸೈನಿಕ ಕ್ಯಾಂಟೀನ್ಗಳಲ್ಲಿ ಮಾರಾಟ ಮಾಡುವುದಾಗಿ ಸರ್ಕಾರ ಸ್ಪಷ್ಟಪಡಿಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ತಮ್ಮ ಭಾಷಣದಲ್ಲಿ ತಮ್ಮ ಸ್ಥಳೀಯರಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಎಲ್ಲರೂ ದೇಶೀಯ ಉತ್ಪನ್ನಗಳನ್ನು ಬಳಕೆ ಮಾಡಬೇಕು ಎಂದು ಮನವಿ ಮಾಡಿದ್ದರು ಅದರಲ್ಲೂ ಪ್ರಮುಖವಾಗಿ ಖಾದಿ ಉತ್ಪನ್ನಗಳನ್ನು ಬಳಕೆ ಮಾಡಬೇಕು ಎಂದು ಕಳಕಳಿಯ ಮನವಿ ಮಾಡಿದ್ದರು.
ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸಲು ಮತ್ತು ಭಾರತವನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮನವಿ ಮಾಡಿದ್ದರು. ಈ ನಿಟ್ಟಿನಲ್ಲಿ, ಜೂನ್ 1 ರಿಂದ ಎಲ್ಲಾ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಕ್ಯಾಂಟೀನ್ಗಳಲ್ಲಿ ಸ್ಥಳೀಯ ಉತ್ಪನ್ನಗಳನ್ನು ಮಾತ್ರ ಮಾರಾಟ ಮಾಡಲು ಗೃಹ ಸಚಿವಾಲಯ ನಿರ್ಧರಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. 'ಬಿಕ್ಕಟ್ಟಿನ ಸಮಯದಲ್ಲಿ, ಈ ಸ್ಥಳೀಯರು ನಮ್ಮ ಬೇಡಿಕೆಯನ್ನು ಈಡೇರಿಸಿದ್ದಾರೆ, ಈ ಸ್ಥಳೀಯರು ನಮ್ಮನ್ನು ಉಳಿಸಿದ್ದಾರೆ. ಸ್ಥಳೀಯರು ಕೇವಲ ಅಗತ್ಯವಲ್ಲ, ಇದು ನಮ್ಮ ಜವಾಬ್ದಾರಿಯೂ ಆಗಿದ್ದಾರೆ ಎಂದು ಪ್ರಧಾನಿ ಮೋದಿ ಭಾಷಣದಲ್ಲಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ .