ಫೀರ್ದೋಸ್ ಸಂಸ್ಥೆಯಿಂದ ವಿಚಾರ ಸಂಕಿರಣ ಮತ್ತು ಪ್ರತಿಭಾ ಪುರಸ್ಕಾರ
Seminar and Talent Award from Firdos Institute
ಕೋಪ್ಪಳ 11: ನಗರ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ದಿನಾಂಕ 14 ರಂದು ಬೆಳಗ್ಗೆ 10.30ಕ್ಕೆ ಫೀರ್ದೋಸ್ ಸಾಂಸ್ಕೃತಿಕ ಕ್ರೀಡೆ ಹಾಗೂ ತರಬೇತಿ ಸಂಸ್ಥೆ, ಕೋಪ್ಪಳ ವತಿಯಿಂದ ಶಿಕ್ಷಣ ಪ್ರೇಮಿ ಹಾಗೂ ಹಿರಿಯ ಸಾಹಿತಿ ಹಾಜಿ ವಹಿದುದ್ದೀನ್ ಅಹಮದ್ ಅವರ ಸ್ಮರಣಾರ್ಥವಾಗಿ ವಿಶೇಷ ಕಾರ್ಯಕ್ರಮ ಹಾಗೂ ವಿಚಾರ ಸಂಕಿರಣ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಕಾರ್ಯಕ್ರಮದ ಉದ್ಘಾಟನೆಯನ್ನು ಯೂಸುಫಿಯಾ ಮಸೀದಿ ಇಮಾಮ್ ಮೌಲಾನ ಮುಫ್ತಿ ಮಹಮ್ಮದ್ ನಜೀರ್ ಅಹಮದ್ ಖಾದ್ರಿ ಅವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಿವಿಲ್ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಧನೆಗೆ ಪ್ರೋತ್ಸಾಹ ನೀಡುವ ಜೊತೆಗೆ ಶಿಕ್ಷಣದಲ್ಲಿ ನೈತಿಕ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 