ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈಜೋಡಿಸಿ: ಹಿರಿಯ ಸಿವಿಲ್ ನ್ಯಾಯಾಧೀಶರಾದ ಶಿವನಗೌಡ್ರ ಕರೆ
Senior Civil Judge Shivana Gowda calls on everyone to join hands to eradicate child labor
ಬಾಲ ಕಾರ್ಮಿಕ ಪದ್ಧತಿ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜಾಥಾ ಕಾರ್ಯಕ್ರಮ
ಗದಗ 11: ಮಕ್ಕಳು ದೇಶದ ಭವಿಷ್ಯವಾಗಿದ್ದು, ಅವರನ್ನು ಬಾಲಕಾರ್ಮಿಕ ಪದ್ಧತಿಯಿಂದ ಮುಕ್ತಗೊಳಿಸಿ ಶಿಕ್ಷಣದ ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ದಿವಾಣಿ (ಸಿವಿಲ್) ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶಿವನಗೌಡ್ರ ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ,ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟ (ರಿ), ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಗದಗ ಇವರ ಸಹಯೋಗದೊಂದಿಗೆ ವಿಶ್ವ ಬಾಲ ಕಾರ್ಮಿಕ ಹಾಗೂ ವಿರೋಧಿ ದಿನದ ಅಂಗವಾಗಿ ಬಾಲ ಕಾರ್ಮಿಕ ಪದ್ಧತಿ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಆಟೋ ಮೂಲಕ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಗದಗ ಬೆಟಗೇರಿ ನಗರಸಭೆ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹಾಗೂ ಹಿರಿಯ ದಿವಾಣಿ ನ್ಯಾಯದೀಶ ಸಿ.ಎಸ್. ಶಿವನಗೌಡ್ರ ಚಾಲನೆ ನೀಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾಲಕಾರ್ಮಿಕ ವಿರೋಧಿ ದಿನದ ಬೃಹತ್ ಜಾಥಾ" ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮದಲ್ಲಿ ಮಾತನಾಡಿದ ನ್ಯಾಯಾಧೀಶರು, ಶಿಕ್ಷಣದಿಂದ ಮಾತ್ರ ಉಜ್ವಲ ಭವಿಷ್ಯ ಸಾಧ್ಯ "ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು. ಶಾಲೆಗೆ ಹೋಗಬೇಕಾದ ವಯಸ್ಸಿನಲ್ಲಿ ಮಕ್ಕಳನ್ನು ಕೆಲಸಕ್ಕೆ ದೂಡುವುದು ಅಪರಾಧವಾಗಿದೆ. ಹೋಟೆಲ್, ಗ್ಯಾರೇಜ್, ಕಟ್ಟಡ ಕಾಮಗಾರಿ ಸೇರಿದಂತೆ ಯಾವುದೇ ಉದ್ಯಮಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡರೆ ಕಾನೂನುಬದ್ಧವಾಗಿ ಕಠಿಣ ಶಿಕ್ಷಣೆಯಾಗಲಿದೆ. ಸಾರ್ವಜನಿಕರು ತಮ್ಮ ಸುತ್ತಮುತ್ತ ಇಂತಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಅಧಿಕಾರಿಗಳ ಗಮನಕ್ಕೆ ತರಬೇಕು" ಎಂದರು.ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿ ಎನ್.ಶ್ರೀಧರ, ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ , ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಶ್ರೀಮತಿ ಜಯದೇವಿ ಅಂದಪ್ಪ ಕವಲೂರು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಹಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ರಾಧ ಮಣ್ಣೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ಜಯಶ್ರೀ ಆರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಮೆಹಬೂಬ ಬೈ ತುಂಬರಮಟ್ಟಿ,
ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ(ರಿ)ಯೋಜನಾ ನಿರ್ದೇಶಕ ಸಂದೇಶ.ಚ. ಪಾಟೀಲ, ನಗರಸಭೆ ಪೌರಯುಕ್ತ ರಾಜರಾಮ ಪವಾರ, ಕಾರ್ಮಿಕ ಇಲಾಖೆ, ಕಾರ್ಮಿಕ ನೀರೀಕ್ಷಕರಾದ ಕುಮಾರಿ ಸುಷ್ಮಾ, ಉಮೇಶ ಎಸ್ ಹುಲ್ಲಣ್ಣವರ, ಪದವಿ ಪೂರ್ವ ಕಾಲೇಜು ಪ್ರಾಚಾರ್ಯರು ಕುಲಕರ್ಣಿ, ಸ್ಪಂದನ ಎನ್.ಜಿ.ಒ ಶ್ರೀಮತಿ ಅಶ್ವಿನಿ ಹಿರೇಮಠ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶಿಕ್ಷಕರು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಗದಗ ಬೆಟಗೇರಿ ನಗರಸಭೆ ಆವರಣದಿಂದ ಪ್ರಾರಂಭವಾಗಿ ಮಹಾತ್ಮ ಗಾಂಧಿ ಸರ್ಕಲ್ ಮಾರ್ಗವಾಗಿ ಮಹೇಂದ್ರಕರ್ ಸರ್ಕಲ್, ಟಾಂಗಕೂಟ, ಹಳೆ ಬಸ್ ನಿಲ್ದಾಣ, ರೋಟರಿ ಸರ್ಕಲ್ ವರೆಗೆ ವಿಶ್ವ ಬಾಲ ಕಾರ್ಮಿಕ ಹಾಗೂ ವಿರೋಧಿ ದಿನದ ಅಂಗವಾಗಿ ಬಾಲ ಕಾರ್ಮಿಕ ಪದ್ಧತಿ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸಿದ ಈ ಜಾಥಾವು ನಗರದ ಪ್ರಮುಖ ರಸ್ತೆಗಳ ಮೂಲಕ ಸಂಚರಿಸಿತು. ಜಾಥಾದಲ್ಲಿ ಪಾಲ್ಗೊಂಡಿದ್ದ ನೂರಾರು ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು "ಬಾಲಕಾರ್ಮಿಕ ಪದ್ಧತಿ ತೊಲಗಲಿ, ಮಕ್ಕಳ ಭವಿಷ್ಯ ಬೆಳಗಲಿ", "ಮಕ್ಕಳಿಗೆ ಕೆಲಸ ಬೇಡ, ಅಕ್ಷರ ನೀಡಿ" ಎಂಬಾ ಇತ್ಯಾದಿ ಘೋಷಣಾ ಫಲಕಗಳನ್ನು ಹಿಡಿದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು 