ಹಿರಿಯ ಫುಟ್ಬಾಲಿಗ ಬ್ಯಾನರ್ಜಿ ನಿಧನ
ಕೋಲ್ಕೊತಾ, ಮಾ 20, ದೀರ್ಘಕಾಲದಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ದಿಗ್ಗಜ ಫುಟ್ಬಾಲ್ ಆಟಗಾರ ಪಿ.ಕೆ. ಬ್ಯಾನರ್ಜಿ ಶುಕ್ರವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.ಅವರಿಗೆ 83 ವರ್ಷ ವಯಸ್ಸಾಗಿತ್ತು. ಕಳೆದ ಎರಡು ವಾರಗಳಿಗೂ ಅಧಿಕ ಸಮಯ ಅವರನ್ನು ಇಲ್ಲಿನ ಮೆಡಿಕಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿರಿಸಲಾಗಿತ್ತು. ಮಾರ್ಚ್ 2ರಂದು ಆಸ್ಪತ್ರೆಗೆ ದಾಖಲಾಗಿದ್ದ ಅವರು ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಸದಸ್ಯರೊಬ್ಬರು ತಿಳಿಸಿದ್ದಾರೆ. ಎರಡು ಬಾರಿಯ ಒಲಿಂಪಿಯನ್ ಮತ್ತು 1962ರ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಭಾರತ ತಂಡದ ಪರ ಏಕೈಕ ಗೋಲ್ ಗಳಿಸಿದ ಬ್ಯಾನರ್ಜಿ ಅವರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 