ಹಿರಿಯ ಪತ್ರಕರ್ತ ಎಲ್‌. ಎಸ್‌. ಶಾಸ್ತ್ರಿಯವರಿಗೆ ಸಹೃದಯ ಗೌರವ ಪ್ರಶಸ್ತಿ

ಹಿರಿಯ ಪತ್ರಕರ್ತ ಎಲ್‌. ಎಸ್‌.  ಶಾಸ್ತ್ರಿಯವರಿಗೆ ಸಹೃದಯ ಗೌರವ ಪ್ರಶಸ್ತಿ  Senior journalist L. S. Shastri to receive Sahridaya Honorary Award

ಲೋಕದರ್ಶನ ವರದಿ 

ಬೆಳಗಾವಿ 26: ಸವದತ್ತಿಯ ಸಹೃದಯ ಸಾಹಿತ್ಯ ಪ್ರತಿಷ್ಠಾನವು ಕೊಡಮಾಡುವ 2025 ರ ಸಾಲಿನ ರಾಜ್ಯಮಟ್ಟದ ‘ಸಹೃದಯ ಗೌರವ ಪ್ರಶಸ್ತಿ’ಗೆ ಜಿಲ್ಲೆಯ ಹಿರಿಯ ಪತ್ರಕರ್ತ, ಸಾಹಿತಿ, ಸಂಘಟಕ ಎಲ್‌. ಎಸ್‌. ಶಾಸ್ತ್ರಿಯವರು ಆಯ್ಕೆಯಾಗಿದ್ದಾರೆ. ಪ್ರತಿಷ್ಠಾನವು ನಾಲ್ಕು ವರ್ಷಗಳಿಂದ ರಾಜ್ಯದ ನಾನಾ ಕ್ಷೇತ್ರದ ಸಾಧಕ ಮಹನೀಯರಿಗೆ ಈ ಗೌರವ ಪ್ರಶಸ್ತಿ ನೀಡುತ್ತ ಬಂದಿದೆ.   ಪತ್ರಿಕೋದ್ಯಮ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ತಮ್ಮ 60 ವರ್ಷಗಳ ಸುದೀರ್ಘ ಸೇವೆಯನ್ನು ಸಲ್ಲಿಸಿರುವ ಎಲ್‌. ಎಸ್‌. ಶಾಸ್ತ್ರಿಯವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದವರಾದರೂ ಬೆಳಗಾವಿ ಜಿಲ್ಲೆ ಇವರ ಕಾರ್ಯ ಕ್ಷೇತ್ರವಾಗಿದೆ. 110 ಕ್ಕೂ ಹೆಚ್ಚು ಕೃತಿಗಳನ್ನು ಮತ್ತು 40 ಸಾವಿರಕ್ಕೂ ಅಧಿಕ ಬಿಡಿ ಬರಹಗಳನ್ನು ಪ್ರಕಟಿಸಿದ್ದಾರೆ. ಪತ್ರಿಕೋದ್ಯಮದ ಜೊತೆಗೆ ಕಲೆ, ಸಾಹಿತ್ಯ, ಯಕ್ಷಗಾನ, ಗಮಕ ಮತ್ತು ನಾಟಕ ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ಸುಮಾರು ಎರಡೂವರೆ ದಶಕಗಳ ಕಾಲ ಬೆಳಗಾವಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅನೇಕ ಬರಹಗಾರರ ಬರವಣಿಗೆಯನ್ನು ಪ್ರೋತ್ಸಾಹಿಸಿ ಬೆಳೆಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.   

ಪತ್ರಿಕೋದ್ಯಮ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ತಮ್ಮ 60 ವರ್ಷಗಳ ಸುದೀರ್ಘ ಸೇವೆಯನ್ನು ಸಲ್ಲಿಸಿರುವ ಎಲ್‌. ಎಸ್‌. ಶಾಸ್ತ್ರಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದವರಾದರೂ ಬೆಳಗಾವಿ ಜಿಲ್ಲೆ ಇವರ ಕಾರ್ಯ ಕ್ಷೇತ್ರವಾಗಿದೆ. 110 ಕ್ಕೂ ಹೆಚ್ಚು ಕೃತಿಗಳನ್ನು ಮತ್ತು 40 ಸಾವಿರಕ್ಕೂ ಅಧಿಕ ಬಿಡಿ ಬರಹಗಳನ್ನು ಪ್ರಕಟಿಸಿದ್ದಾರೆ. ಪತ್ರಿಕೋದ್ಯಮದ ಜೊತೆಗೆ ಕಲೆ, ಸಾಹಿತ್ಯ, ಯಕ್ಷಗಾನ, ಗಮಕ ಮತ್ತು ನಾಟಕ ಕ್ಷೇತ್ರಗಳಲ್ಲಿ ಅಪಾರ ಕೊಡುಗೆ ನೀಡಿದ್ದಾರೆ. ಸುಮಾರು ಎರಡೂವರೆ ದಶಕಗಳ ಕಾಲ ಬೆಳಗಾವಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅನೇಕ ಬರಹಗಾರರ ಬರವಣಿಗೆಯನ್ನು ಪ್ರೋತ್ಸಾಹಿಸಿ ಬೆಳೆಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.   ಜೂನ 7 ರಂದು ಚೆನ್ನಮ್ಮ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿರುವ ಸಹೃದಯ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭದಂದು ರಾಜ್ಯ ಮಟ್ಟದ ಈ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ನಾಗೇಶ್ ಜೆ. ನಾಯಕ, ಕಾರ್ಯದರ್ಶಿ ರಮೇಶ ತಳವಾರ ತಿಳಿಸಿದ್ದಾರೆ.