ಹಿರಿಯ ಪತ್ರಕರ್ತ ಪುಂಡಲೀಕ ಬಾಳೋಜಿ ಅವರಿಗೆ ಪ್ರತಿಷ್ಠಿತ ದತ್ತಿನಿಧಿ ಪ್ರಶಸ್ತಿ ಗೌರವ
Senior journalist Pundalik Baloji honoured with prestigious Endowment Fund Award
ಸವದತ್ತಿ 15 : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಹಾಗೂ ಸವದತ್ತಿ ತಾಲೂಕಿನ ಹಿರಿಯ ವರದಿಗಾರರಾದ ಪುಂಡಲೀಕ ಬಾಳೋಜಿ, ಅವರು ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ನೀಡಲಾಗುವ ಪ್ರತಿಷ್ಠಿತ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಕಳೆದ 30 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸುತ್ತಿರುವ ಇವರು, ವಿಜಯ ಕರ್ನಾಟಕ, ಕರ್ನಾಟಕ ಟೈಮ್ಸ್ ಸೇರಿದಂತೆ ಪ್ರಮುಖ ದಿನಪತ್ರಿಕೆಗಳು ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದಾರೆ.
ಈ ಹಿಂದೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಎರಡು ಅವಧಿಗೆ ಯಶಸ್ವಿಯಾಗಿ ಸೇವೆ ಸಲ್ಲಿಸಿರುವ ಇವರು, ಪ್ರಸ್ತುತ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಇವರ ಗಣನೀಯ ಸಾಧನೆಯನ್ನು ಗುರುತಿಸಿ ಕಳೆದ ವರ್ಷವಷ್ಟೇ ಇವರಿಗೆ ಪ್ರತಿಷ್ಠಿತ ಕರ್ನಾಟಕ ಮಾಧ್ಯಮ ಅಕಾಡೆಮಿ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಇದೀಗ ಮತ್ತೊಂದು ಗರಿ ಮುಡಿಗೇರಿದ್ದು, ಮೇ 16 ರಂದು ಕಾಸರಗೋಡಿನಲ್ಲಿ ಆಯೋಜಿಸಲಾಗಿರುವ ಭವ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಇವರಿಗೆ ’ದತ್ತಿ ನಿಧಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಹಿರಿಯ ಪತ್ರಕರ್ತ ಪುಂಡಲೀಕ ಬಾಳೋಜಿ ಅವರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ಸವದತ್ತಿ ತಾಲೂಕಿನ ಪತ್ರಕರ್ತರು, ಗಣ್ಯರು ಹಾಗೂ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 