ಹಿರಿಯ ಪತ್ರಕರ್ತ ಸುಭಾಷ ದಲಾಲ ನಿಧನ
Senior journalist Subhash Dalal passes away
ಚಿಕ್ಕೋಡಿ 28 : ಪಟ್ಟಣದ ಎ.ಪಿ. ಲೇಓಟ್ ನಿವಾಸಿಯಾಗಿದ್ದ ಕನ್ನಡ ದಿನಪತ್ರಿಕೆಯ ಹಿರಿಯ ಪತ್ರಕರ್ತರಾದ ಸುಭಾಷ ದಲಾಲ (58) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಗುರುವಾರ ಬೆಳಗಿನ ಜಾವ ನಿಧನರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ತಮ್ಮ ವೃತ್ತಿಜೀವನದಲ್ಲಿ ಪರಿಶ್ರಮಿ ಮತ್ತು ನಿಷ್ಠಾವಂತ ಪತ್ರಕರ್ತರಾಗಿ ಗುರುತಿಸಿಕೊಂಡಿದ್ದ ಸುಭಾಷ ದಲಾಲ ಅವರು ಸಂಯುಕ್ತ ಕರ್ನಾಟಕ.
ಕನ್ನಡಪ್ರಭ.ಉದಯವಾಣಿ ಮತ್ತು ವಿಜಯವಾಣಿ ಪತ್ರಿಕೆಯಲ್ಲಿ ತಾಲೂಕಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು.ಮೃತರು ತಂದೆ-ತಾಯಿ.ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಮಿತ್ರರು ಹಾಗೂ ಪತ್ರಿಕಾ ಬಳಗವನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಸ್ಥಳೀಯ ಪತ್ರಕರ್ತರು, ರಾಜಕೀಯ ಮುಖಂಡರು ಹಾಗೂ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ 