ಜೈನ ಸಮುದಾಯದ ಸೇವೆ ದೇಶದ ಪ್ರಗತಿಗೆ ಮಹತ್ವದ್ದು: ರಾಜ್ಯಪಾಲ
Service of Jain community is important for the progress of the country: Governor
ಚಿಕ್ಕೋಡಿ 26: ಭಾರತದ ಸಂಸ್ಕೃತಿ ‘ವಸುದೈವ ಕುಟುಂಬಕಂ’ ಎಂಬ ಮೌಲ್ಯವನ್ನು ಉಳಿಸಿಕೊಂಡಿದೆ. ಶಿಕ್ಷಣದ ಉದ್ದೇಶವು ರಾಷ್ಟ್ರದ ಸಮಗ್ರತೆ, ಉದ್ಯೋಗಾಭಿವೃದ್ಧಿ ಹಾಗೂ ಸಮಾಜ ಮತ್ತು ರಾಷ್ಟ್ರಕ್ಕೆ ಕೊಡುಗೆ ನೀಡುವಂತಾಗಿರಬೇಕು ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹೇಳಿದರು. ಚಿಕ್ಕೋಡಿ ತಾಲೂಕಿನ ಶಮನೇವಾಡಿ- ನೇಜ್ ಕ್ರಾಸ್ ಬಳಿ ಎಜಿಎಂ ಇಂಜನಿಯರಿಂಗ್ ಕಾಲೇಜು ಉದ್ಘಾಟನೆ. 150 ಅಡಿ ಎತ್ತರ ಪಾರ್ಶ್ವನಾಥ ವಿಹ್ರಹ ಭೂಮಿ ಶುದ್ಧಿಕರಣ ಹಾಗೂ ಸರಸ್ವತಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜೈನ ಸಮುದಾಯವು ದೇಶದ ಪ್ರಗತಿಗೆ ಮಹತ್ವದ ಕೊಡುಗೆ ನೀಡಿದ್ದು, ಅಹಿಂಸೆ, ನೈತಿಕತೆ, ಶಿಸ್ತು ಮತ್ತು ರಾಷ್ಟ್ರಸೇವೆಯ ಮೌಲ್ಯಗಳನ್ನು ಸಮಾಜದಲ್ಲಿ ಬಲಪಡಿಸಿದೆ. ಧರ್ಮ, ಸಂಸ್ಕೃತಿ, ಸಮಾನತೆ ಮತ್ತು ಮಾನವೀಯತೆಯನ್ನು ಕಾಪಾಡಿಕೊಳ್ಳುವುದು ನಮ್ಮ ಗುರಿಯಾಗಿರಬೇಕು ಎಂದು ಅವರು ಹೇಳಿದರು.
ಜೈನ ಸಮುದಾಯದ ಕಾರ್ಯಗಳು ಮಾನವ ಕಲ್ಯಾಣದ ಸಂದೇಶವನ್ನು ಸಾರುತ್ತಿವೆ. ಆಧ್ಯಾತ್ಮಿಕತೆಯ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲೂ ಶಾಮ್ನೇವಾಡಿಯಲ್ಲಿ ಪ್ರಗತಿ ಕಂಡುಬಂದಿದೆ. ಬಡ ವಿದ್ಯಾರ್ಥಿಗಳಿಗಾಗಿ ಎಂಜಿನಿಯರಿಂಗ್ ಮಹಾವಿದ್ಯಾಲಯ ಆರಂಭಿಸಿರುವುದು ಶ್ಲಾಘನೀಯ ಕಾರ್ಯ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟರು. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಾತನಾಡಿ, ದೇಶದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಹಿಂದಿನ ಗುರುಕುಲ ವ್ಯವಸ್ಥೆ, ಕುಟುಂಬ ಮೌಲ್ಯಗಳು ಮತ್ತು ಧಾರ್ಮಿಕ ಸಂಸ್ಥೆಗಳ ಪಾತ್ರವನ್ನು ಬಲಪಡಿಸುವ ಅಗತ್ಯವಿದೆ ಎಂದರು. ಇಂದಿನ ಪೀಳಿಗೆಗೆ ಮೌಲ್ಯಾಧಾರಿತ ಶಿಕ್ಷಣ ಅತ್ಯಗತ್ಯವಾಗಿದೆ ಎಂದು ಹೇಳಿದರು.
ಸಾನಿಧ್ಯ ವಹಿಸಿದ ರಾಷ್ಟ್ರಸಂತ ಆಚಾರ್ಯ ಗುಣಧರನಂದಿ ಮಹಾರಾಜರು ಮಾತನಾಡಿ, ಸಮಾಜದಿಂದ ಪಡೆದ ಪ್ರೀತಿಗೆ ಪ್ರತಿಯಾಗಿ ಧಾರ್ಮಿಕ ಹಾಗೂ ಶೈಕ್ಷಣಿಕ ಸೇವೆಗಳನ್ನು ಸಲ್ಲಿಸಲಾಗುತ್ತಿದೆ. ಎಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ಬಡ ಮತ್ತು ಅನಾಥ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. 151 ಅಡಿ ಎತ್ತರದ ಏಕಶಿಲಾ ಪಾರ್ಶ್ವನಾಥರ ವಿಗ್ರಹವನ್ನು ತಮಿಳುನಾಡಿನಲ್ಲಿ ನಿರ್ಮಿಸಿ ಇಲ್ಲಿ ಪ್ರತಿಷ್ಠಾಪಿಸಲಾಗುವುದು ಎಂದು ಹೇಳಿದರು.ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಮಾತನಾಡಿ, ಆಚಾರ್ಯರ ಸೇವೆ ಸಮಾಜಮುಖಿಯಾಗಿದ್ದು, ವಿಗ್ರಹ ಸ್ಥಾಪನೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು.
ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕೃತಿಯ ಅರಿವು ಅಗತ್ಯವಿದ್ದು, ಈ ಕಾರ್ಯಗಳಿಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಧರ್ಮಸೇನ ಭಟ್ಟಾರಕ ಪಟ್ಟಾಚಾರ್ಯ ಮಹಾರಾಜರು, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ದುರ್ಯೋಧನ ಐಹೊಳೆ, ಅಭಯ ಪಾಟೀಲ, ಮಹಾಂತೇಶ ಕವಟಗಿಮಠ, ಸಂಜಯ ಪಾಟೀಲ, ಪಿ. ರಾಜೀವ್, ಅನಿಲ್ ಬೆಣಕೆ, ಮಹೇಶ ಕುಮಟ್ಟೊಳ್ಳಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬಿ.ಎಲ್. ಸಂತೋಷ್ ಅವರಿಗೆ ‘ಕರ್ಮಯೋಗಿ’ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಇತ್ತೀಚೆಗೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕಿರಣ್ ಕಮತೆ ಅವರನ್ನು ಸನ್ಮಾನಿಸಲಾಯಿತು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 