ಜನಸೇವೆಯೇ ಸರ್ಕಾರದ ಮೂಲ ಆಶಯ: ಸಿಎಂ ಡಿ.ಕೆ. ಶಿವಕುಮಾರ್
Serving the people is the government's fundamental objective: CM D.K. Shivakumar
ಗದಗ, ಆ.11: ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಜನಸಾಮಾನ್ಯರ ಸೇವಕರಾಗಿ ಕಾರ್ಯನಿರ್ವಹಿಸಬೇಕು. ಸರ್ಕಾರದ ಯಶಸ್ಸು ಹಾಗೂ ಸಾರ್ವಜನಿಕ ಸೇವೆಯಲ್ಲಿ ಪ್ರತಿಯೊಬ್ಬ ಅಧಿಕಾರಿ ಮತ್ತು ನೌಕರನ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಮಂಗಳವಾರ ನಡೆದ ‘ಕರ್ನಾಟಕ ಸರ್ಕಾರದ ನೌಕರರೊಂದಿಗೆ ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಎಂಬ ಭೇದವಿಲ್ಲದೆ ಜನರ ಏಳಿಗೆಗಾಗಿ ಕೆಲಸ ಮಾಡಬೇಕು. ಅಧಿಕಾರಿಗಳ ಜವಾಬ್ದಾರಿ ಕೇವಲ ಆಡಳಿತಕ್ಕೆ ಸೀಮಿತವಾಗದೆ, ಜನರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿರಬೇಕು ಎಂದರು. ರಾಜ್ಯದ ಸುಮಾರು 7 ಕೋಟಿ ಜನಸಂಖ್ಯೆಯ ಪೈಕಿ ಅತಿ ಕಡಿಮೆ ಸಂಖ್ಯೆಯ ನೌಕರರು ಹಾಗೂ ಅಧಿಕಾರಿಗಳಿಗೆ ಸಾರ್ವಜನಿಕ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 