ಬೆಂಗಳೂರು, ಡಿ.9- ಅಧಿವೇಶನದಲ್ಲಿ ಭಾಗವಹಿಸಲು ನಮಗೆ ಯಾವುದೇ ಭಯ ಇಲ್ಲ. ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಅಭೂತಪೂರ್ವ ಜನ ಬೆಂಬಲ ಸಿಕ್ಕಿದೆ. ಇದೇ ಸಂದರ್ಭದಲ್ಲಿ ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್ ಹೇಳಿದರು.
ಎನ್ಎಸ್ಯುಐ ವತಿಯಿಂದ ಆಯೋಜಿಸಲಾಗಿದ್ದ ಭವಿಷ್ಯದ ಭಾರತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಬೆಳಗಾವಿ ಅಧಿವೇಶನದಲ್ಲಿ ಬಹುತೇಕ ಕಾಂಗ್ರೆಸ್ ಪ್ರಮುಖ ನಾಯಕರು ಗೈರು ಹಾಜರಾಗುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಅಧಿವೇಶನದಲ್ಲಿ ಭಾಗವಹಿಸಲು ನಮಗೆ ಯಾವುದೇ ಹಿಂಜರಿಕೆ ಇಲ್ಲ. ಧೈರ್ಯದಿಂದ ಹೋಗುತ್ತೇವೆ. ಸಿದ್ದರಾಮಯ್ಯ ಅವರು 10 ದಿನಗಳ ಹಿಂದೆ ನಿಗದಿಯಾಗಿದ್ದ ಕಾರ್ಯಕ್ರಮದಂತೆ ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಡಿ.17ರ ನಂತರ ಅವರು ಅಧಿವೇಶನದಲ್ಲಿ ಭಾಗವಹಿಸುತ್ತಾರೆ. ಬಿಜೆಪಿಯನ್ನು ಎದುರಿಸಲು ನಮ್ಮಲ್ಲಿ ಬಹಳಷ್ಟು ಮಂದಿ ಸಮರ್ಥ ನಾಯಕರಿದ್ದಾರೆ ಎಂದರು.
ನಮಗೆ ಜನಾಶೀವರ್ಾದವಿದೆ. ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ನಾವು ಹೆಚ್ಚು ಸ್ಥಾನ ಗೆದ್ದಿದ್ದೇವೆ. ಅದೇ ಹುಮ್ಮಸ್ಸಿನಲ್ಲಿ ಅಧಿವೇಶನದಲ್ಲಿ ಭಾಗವಹಿಸುತ್ತೇವೆ. ಡಿ.18ರಂದು ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ ಎಂದು ಹೇಳಿದರು.
ಸಭಾಪತಿ ಸ್ಥಾನದ ವಿಷಯವಾಗಿ ಹಿರಿಯ ನಾಯಕರು ಸೂಕ್ತ ನಿಧರ್ಾರ ತೆಗೆದುಕೊಳ್ಳುತ್ತಾರೆ. ಚುನಾವಣೆ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಸಿದವರು ಸಭಾಪತಿ ಆಗುತ್ತಾರೆ ಎಂದರು.ಅಧಿವೇಶನ ಮುಗಿದ ಬಳಿಕ ಡಿ.22ರಂದು ಸಚಿವ ಸಂಪುಟ ವಿಸ್ತರಣೆಯಾಗುವುದು ಖಚಿತ. ಕೆಲವು ಶಾಸಕರು ಅಧಿವೇಶನಕ್ಕೆ ಗೈರು ಹಾಜರಾಗುತ್ತಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರ ಗೈರು ಹಾಜರಿಗೂ