ಬೆಲೆ ನಿಗದಿ ಮಾಡಿ ಕಾರ್ಖಾನೆ ಪ್ರಾರಂಭಿಸಿ: ನಾಗನಾಥಗೌಡ
Set a price and start a factory: Naganathgowda
ಇಂಡಿ 28: ಪ್ರತಿ ಟನ್ ಕಬ್ಬಿಗೆ ಮೂರುವರೆ ಸಾವಿರ ರೂಪಾಯಿ ಬೆಂಬಲ ಬೆಲೆ ಘೋಷಣೆ ಮಾಡಿ ವಿಜಯಪೂರ ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಗಳನ್ನು ಪ್ರಾರಂಭಿಸಬೇಕು ಎಂದು ವಿಜಯಪೂರ ಜಿಲ್ಲಾ ಅಧಿಕಾರಿಗಳಾದ ಕೆ ಆನಂದ ಅವರಿಗೆ ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.
ಉಪಾಧ್ಯಕ್ಷರು ಹಾಗೂ ವಿಜಯಪೂರ ಜಿಲ್ಲಾ ಅಧ್ಯಕ್ಷರಾದ ನಾಗನಾಥಗೌಡ ಬಿರಾದಾರ ಅವರ ನೇತೃತ್ವದಲ್ಲಿ ನೂರಾರು ರೈತರ ಸಮ್ಮುಖದಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಅವರು ಕಬ್ಬು ಬೆಳೆಗಾರರು ತುಂಬಾ ಸಂಕಷ್ಟದಲ್ಲಿ ಇದ್ದಾರೆ ಗೊಬ್ಬರ ಬೆಲೆ ಕೆಲಸಗಾರ ಸಂಬಳ ಹೆಚ್ಚಾಗಿದ್ದು ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಹಾಗೂ ಅತಿವೃಷ್ಟಿಯಿಂದ ಭೀಮಾ ತೀರದ ರೈತರು ಕಬ್ಬು ಬೆಳೆಗಳು ಹಾಗೂ ಇತರೆ ಬೆಳೆಗಳನ್ನು ಕಳೆದುಕೊಂಡು ರೈತರ ಬದುಕು ಮೂರಾಬಟ್ಟೆ ಆಗಿ ಹೋಗಿದೆ. ಮಾಹಾರಾಷ್ಟದ ಎಲ್ಲಾ ಕಾರ್ಖಾನೆಗಳು ಮತ್ತು ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯ ಕಾರ್ಖಾನೆಯವರು 3500 ರೂಂ ಬೆಂಬಲ ಬೆಲೆ ನೀಡಿದ್ದಾರೆ. ಅದರಂತೆ ವಿಜಯಪೂರ ಜಿಲ್ಲೆಯ ಎಲ್ಲಾ ಕಾರ್ಖಾನೆಗಳು ಪ್ರಾರಂಭಕ್ಕೂ ಮುನ್ನ ಬೆಲೆ ನಿಗದಿ ಮಾಡಿ ಕಾರ್ಖಾನೆಗಳನ್ನು ಪ್ರಾರಂಭಿಸಬೇಕು. ಇಲ್ಲವಾದರೆ ಕಾರ್ಖಾನೆ ಮುಂದೆ ಪ್ರತಿಭಟನೆ ನುಡಿಸಲಾಗದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಸುಭಾಷ್ ಬೈರಗೊಂಡ, ಶಂಕರ ಕುಂಬಾರ, ಮಲಕನಗೌಡ ಬಿರಾದಾರ, ಹಹೇಬಗೌಡ ಜೇವೂರ, ಚಿದಾನಂದ ಬಿರಾದಾರ, ಅನೀಲಗೌಡ ಪಾಟೀಲ, ಕುಲಂಕಾರ ಲೋಣಿ, ಕಲ್ಲನಗೌಡ ಬಿರಾದಾರ, ಮಲ್ಲಿಕಾರ್ಜುನ ಬೈರಗೊಂಡ, ಶ್ರೀಮಂತ ಉಮರಾಣಿ, ಚಂದ್ರಕಾಂತ ಬಿರಾದಾರ, ರವಿ ಬೈರಾಮಡಿ, ಬಸವರಾಜ ಡೊಣಿ ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 