ನವದೆಹಲಿ, ಸೆ 14 ಬಿಜೆಪಿ ಕಾರ್ಯಕರ್ತರಿಂದ ಒಂದು ವಾರಗಳ ಕಾಲ ರೋಗಿಗಳಿಗೆ ಹಣ್ಣು - ಹಂಪಲು ವಿತರಿಸುವ ಸೇವಾ ಸಪ್ತಾಹ ದೇಶಾದ್ಯಂತ ಇಂದಿನಿಂದ ಆರಂಭವಾಗಿದೆ. ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ನೀಡುವ ಮೂಲಕ ಸಪ್ತಾಹಕ್ಕೆ ಚಾಲನೆ ನೀಡಿದ್ದಾರೆ. ಇದೇ 17 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಇಂದಿನಿಂದ 20 ನೇ ತಾರೀಖಿನವರೆಗೆ ಸೇವಾ ಸಪ್ತಾಹ ಆಚರಿಸಲು ನಿರ್ಧರಿಸಿದ್ದಾರೆ. ಅಲ್ಲದೇ ರಕ್ತದಾನ ಶಿಬಿರ, ಆರೋಗ್ಯ ಶಿಬಿರಗಳನ್ನೂ ಆಯೋಜಿಸಲಾಗಿದೆ, ಸ್ವಚ್ಛತಾ ಅಭಿಯಾನ, ಜಲ ಸಂರಕ್ಷಣೆ, ಏಕಬಳಕೆಯ ಪ್ಲಾಸ್ಟಿಕ್ ಹಾನಿ ಮೊದಲಾದ ವಿಷಯಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ.