ಸ್ವಾಭಿಮಾನ, ಸಮಾನತೆ ಬದುಕು ಕಲಿಸಿದ ಮಹಾನ್ ಸಂತ ಸೇವಲಾಲ್: ಸತೀಶ ಸೈಲ್
Sevalal was a great saint who taught self-respect, equality and a life of dignity: Satish Sail
ಲೋಕದರ್ಶನ ವರದಿ
ಕಾರವಾರ, ಫೆ.15 :- ಸಂತ ಸೇವಾಲಾಲ್ ಅವರು ಬಂಜಾರ ಸಮುದಾಯಕ್ಕೆ ಸ್ವಾಭಿಮಾನದ ಬದುಕು ಮತ್ತು ಸಾಮಾಜಿಕ ಸಮಾನತೆಯನ್ನು ಕಲಿಸಿದ ಮಹಾನ್ ಸಂತ ಎಂದು ಶಾಸಕ ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ ಸೈಲ್ ಹೇಳಿದರು.
ಅವರು ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಹಾನಾಯಕ ತಾಂಡ, ಸೇವಾಲಾಲ ಆವರಣ, ಸೀತಾ ನಗರ ಬಿಣಗಾದಲ್ಲಿ ನಡೆದ ಸಂತ ಸೇವಲಾಲ ಜಯಂತಿ ಉದ್ಘಾಟಿಸಿ ಮಾತನಾಡಿದರು.
ಸಂತ ಸೇವಲಾಲ ಅವರು ಬಂಜಾರ ಸಮುದಾಯದ ಆರಾಧ್ಯ ದೈವ, ಆಧ್ಯಾತ್ಮಿಕ ಗುರು ಮತ್ತು ಸಮಾಜ ಸುಧಾರಕರಾಗಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಇವರನ್ನು ಪೂಜಿಸಲಾಗುತ್ತದೆ. ಇವರು ಸತ್ಯ, ಅಹಿಂಸೆ, ಬ್ರಹ್ಮಚರ್ಯ ಮತ್ತು ವ್ಯಸನ ಮುಕ್ತ ಜೀವನವನ್ನು ಬೋಧಿಸಿದರು ಹಾಗೂ ಎಲ್ಲರೂ ಶಿಕ್ಷಿತರಾಗಿ ಅಕ್ಷರ ಜ್ಞಾನವನ್ನು ಪಡೆದು ಜಗತ್ತಿಗೆ ದಾರಿ ದೀಪವಾಗಬೇಕು ಎಂದು ಶಿಕ್ಷಣದ ಮಹತ್ವವನ್ನು ಸಾರಿದ್ದರು ಎಂದು ಹೇಳಿದರು. ಸಂತ ಸೇವಲಾಲ ಕುರಿತು ಅನಿಲ ಪವಾರ ಉಪನ್ಯಾಸ ನೀಡಿದರು.ಕಾರ್ಯಕ್ರಮದಲ್ಲಿ ತಹಸೀಲ್ದಾರ ನಿಶ್ಚಲ್ ನರೋನ್ಹ, ಚುನಾವಣೆ ಶಾಖೆಯ ತಹಶೀಲ್ದಾರ ಪ್ರಮೋದ ನಾಯ್ಕ, ಬಂಜಾರ ಸಂಘದ ಅಧ್ಯಕ್ಷ ಸತೀಶ್ ನಾಯ್ಕ, ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ಎಂ ನಾಯ್ಕ ಸ್ವಾಗತಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 