ತೀವ್ರ ಪ್ರವಾಹ ಪರಿಸ್ಥಿತಿ: ಮಹಾರಾಷ್ಟ್ರ ಮುಖ್ಯಮಂತ್ರಿ ಜೊತೆ ಯಡಿಯೂರಪ್ಪ ಮಾತುಕತೆ

ಬೆಳಗಾವಿ, ಆ 8    ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ 

ಗುರುವಾರ ಮಧ್ಯಾಹ್ನ ಯಡಿಯೂರಪ್ಪಗೆ ಮೊಬೈಲ್ ಕರೆ ಮಾಡಿ ಮಾತನಾಡಿದ ದೇವೇಂದ್ರ ಪಡ್ನವೀಸ್, ಕೋಯ್ನಾ ಜಲಾಶಯದಿಂದ 5 ಲಕ್ಷಕ್ಕೂ ಕ್ಯೂಸೆಕ್ ಗೂ ಹೆಚ್ಚು ನೀರು ಹರಿದು ಬರುತ್ತಿದೆ. 

ಹೀಗಾಗಿ ಆಲಮಟ್ಟಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಿದರು. 

ಕೋಯ್ನಾ ಜಲಾಶಯದಿಂದ ನೀರು ಹರಿದುಬರುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಸೇರಿದಂತೆ ಮಹಾರಾಷ್ಟ್ರ ಗಡಿಭಾಗದ ಗ್ರಾಮಗಳಿಗೆ ಹಾಗೂ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡುವಂತೆಯೂ, ಅಗತ್ಯವಿದ್ದಲ್ಲಿ ಜನರನ್ನು ಸ್ಥಳಾಂತರಿಸುವಂತೆ ಅವರು ಮನವಿ ಮಾಡಿದರು. 

ಮಹಾರಾಷ್ಟ್ರ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದ ಬಳಿಕ ಯಡಿಯೂರಪ್ಪ, ಈ ಬಗ್ಗೆ ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.