ಚಾಮರಾಜನಗರ, ಫೆ 10 : ತನ್ನ ಅಪ್ರಾಪ್ತ ಮಲ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಚಾಮರಾಜನಗರದ ಗಾಳಿಪುರ ಬಡಾವಣೆಯಲ್ಲಿ ಈ ಹೀನ ಕೃತ್ಯ ನಡೆದಿದ್ದು, ಆರೋಪಿ ತಂದೆ ಮಹಮ್ಮದ್ ಮುಸ್ತಾಫ (30)ನನ್ನು ಪೊಲೀಸರು ಬಂಧಿಸಿದ್ದಾರೆ.
ಮಹಮ್ಮದ್ ಮುಸ್ತಾಫಾಗೆ ಇಬ್ಬರು ಪತ್ನಿಯರಿದ್ದರು. ಎರಡನೇ ಹೆಂಡತಿ ಜ.31 ರಂದು ಕೆಲಸದ ನಿಮಿತ್ಯ ಬೆಂಗಳೂರಿಗೆ ತೆರಳಿದ್ದಾಗ ಮಲ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದು ಬಂದಿದೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ತನ್ನ ಗಂಡನೇ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಆತನ ಎರಡನೇ ಹೆಂಡತಿ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಮಹಮ್ಮದ್ ಮುಸ್ತಾಫ್ ನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.