ಸೆಲ್ಪ್ ಕ್ವಾರಂಟೈನ್ ವಿಧಿಸಿಕೊಂಡಿರುವ ಶಬನಾ ಅಜ್ಮಿ
ಮುಂಬೈ, ಮಾ ೨೦, ಪ್ರಮುಖ ಬಾಲಿವುಡ್ ಹಿರಿಯ ನಟಿ ಶಬನಾ ಅಜ್ಮಿ ಸ್ವಯಂ - ನಿರ್ಬಂಧದಲ್ಲಿದ್ದಾರೆ. ಬುಡಾಪೆಸ್ಟ್ ನಿಂದ ಇತ್ತೀಚೆಗೆ ಹಿಂದಿರುಗಿದ ಅವರು, ದೇಶದಲ್ಲಿ ಕೋವಿಡ್ -೧೯ (ಕರೋನಾ ವೈರಸ್) ಹಬ್ಬುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೆಲ್ಪ್ ಕ್ವಾರಂಟೈನ್ ವಿಧಿಸಿಕೊಂಡಿರುವುದಾಗಿ ಹೇಳಿದ್ದಾರೆ. ನಾನು ಮಾರ್ಚ್ ೧೫ ರ ಬೆಳಗ್ಗೆ ಬುಡಾಪೆಸ್ಟ್ ನಿಂದ ಭಾರತಕ್ಕೆ ಮರಳಿ ಬಂದಿದ್ದು, ಮಾರ್ಚ್ ೩೦ ರವರೆಗೆ ಸೆಲ್ಪ್ ?ಐಸೋಲೇಷನ್ ನಲ್ಲಿ ಇರಲು ನಿರ್ಧರಿಸಿದ್ದೇನೆ ಎಂದು ಶಬನಾ ಅಜ್ಮಿ ಟ್ವಿಟರ್ ನಲ್ಲಿ ಪ್ರಕಟಿಸಿದ್ದಾರೆ.
ಕರೋನಾ ವೈರಸ್ ಭಯದಿಂದ ಜಗತ್ತು ತಲ್ಲಣಗೊಂಡಿದೆ. ವೈರಸ್ ಹರಡದಂತೆ ಸರ್ಕಾರಗಳು ಹಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿವೆ. ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಜ್ಞರು ನಿರಂತರವಾಗಿ ಸಲಹೆ ನೀಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಹಲವು ಸೆಲೆಬ್ರೆಟಿಗಳು ಸ್ವಯಂ ನಿರ್ಬಂಧಗಳನ್ನು ವಿಧಿಸಿಕೊಳ್ಳುತ್ತಿದ್ದಾರೆ. ಆದರೆ ಕೆಲವರು ತಮ್ಮ ಪ್ರಯಾಣದ ವಿವರಗಳನ್ನು ಗೌಪ್ಯವಾಗಿಡುವ ಮೂಲಕ ಅಪಾಯದ ತೀವ್ರತೆಯನ್ನು ಹೆಚ್ಚಿಸುತ್ತಿದ್ದಾರೆ. ಕರೋನಾ ಸಾಂಕ್ರಾಮಿಕದಿಂದ ವಿಶ್ವಾದ್ಯಂತ ೧೦ ಸಾವಿರಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಿನ ಅಂಕಿಅಂಶಗಳಂತೆ ಜಗತ್ತಿನಾದ್ಯಂತ ೨.೫ ದಶಲಕ್ಷಕ್ಕೂ ಹೆಚ್ಚು ಜನರು ಬಾಧಿತಗೊಂಡಿದ್ದಾರೆ.
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು 