ಪೋಷಣ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಶೈಲಜಾ ಮಾನ್ವಿ
Shailaja Manvi inaugurated the Poshan Month celebration program
ಪೋಷಣ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಶೈಲಜಾ ಮಾನ್ವಿ
ಗದಗ 24: ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಂಚೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗದಗ ಹಾಗೂ ಶಿಶು ಅಭಿವೃದ್ಧಿ ಯೋಜನೆ, ಗದಗ ಇವರ ಸಂಯುಕ್ತಾಶ್ರಯದಲ್ಲಿ ದಿ. 23ರಂದು ಗದಗ ತಾಲೂಕಿನ ಪೇಟೆ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಪೋಷಣ ಮಾಸಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗುವುದರೊಂದಿಗೆ ಶೈಲಜಾ ವಿನಾಯಕ ಮಾನ್ವಿ ಓಣಿಯ ಹಿರಿಯರು ಉದ್ಘಾಟಿಸಿದರು. ಮ ಮ ಅ ಇ ನಿರೂಪಣಾಧಿಕಾರಿಗಳು ರಾಧಾ ಜಿ ಮಣ್ಣೂರ ಇವರು ಮಾತನಾಡಿ ಪೋಷಣ ಮಾಸಾಚರಣೆ 2025ರ ಮುಖ್ಯ ವಿಷಯಗಳಾದ ಬೊಜ್ಜುತನ ನಿವಾರಣೆ, ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವುದು, ಪೋಷಣ ಭಿ ಪಢಾಯಿ ಭಿ, ಶಿಶು ್ಘ ಚಿಕ್ಕ ಮಕ್ಕಳ ಆಹಾರ ಅಭ್ಯಾಸಗಳು, ಪುರುಷರ ಸಹಬಾಗಿತ್ವದ ಕುರಿತಾದ ಮಾಹಿತಿಗಳನ್ನು ನೀಡಿದರು.
ಅಧ್ಯಕ್ಷ ಸ್ಥಾನವನ್ನು ವಹಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ. ಇವರು ಮಾತನಾಡಿ ಪೌಷ್ಠಿಕ ಆಹಾರವನ್ನು ಮಕ್ಕಳು, ಗರ್ಭಿಣಿ, ಬಾಣಂತಿಯರು ಸರಿಯಾಗಿ ಸೇವಿಸಬೇಕು ಹಾಗೂ ಅದರ ಮಹತ್ವದ ಬಗ್ಗೆ ವಿವರವಾಗಿ ಮಾತನಾಡಿದರು. ನಂತರ ಲಿಂಗತ್ವ ಅಲ್ಪ ಸಂಖ್ಯಾತರ ಹಾಗೂ ದೇವದಾಸಿಯರ ಮರುಸಮೀಕ್ಷೆ ಕುರಿತಾದ ಕರಪತ್ರಗಳನ್ನು ಬಿಡುಗಡೆ ಮಾಡಿದರು.
ಎಚ್.ಎಸ್ ಜೋಗೇರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಗದಗ, ಕು. ಸಂಗೀತಾ ಹೂಗಾರ ಪೋಷಣ ಜಿಲ್ಲಾ ಸಂಯೋಜಕರು, ಕು. ಪವನ ಕಾಟೀಗರ ಪೋಷಣ ಜಿಲ್ಲಾ ಕಾರ್ಯಕ್ರಮ ಸಹಾಯಕರು, ಆರೋಗ್ಯ ್ಘ ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿಗಳು, ಗದಗ 2 ವಲಯದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಗರ್ಭಿಣಿಯರು, ತಾಯಂದಿರು, ಮುದ್ದು ಮಕ್ಕಳು ಭಾಗವಹಿಸಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 