ವಿವಿಧ ಕಾಮಗಾರಿಗಳಿಗೆ ಚಾಲನೆ ಶೈಲೇಂದ್ರ ಬೆಲ್ದಾಳೆ

ವಿವಿಧ ಕಾಮಗಾರಿಗಳಿಗೆ ಚಾಲನೆ  ಶೈಲೇಂದ್ರ ಬೆಲ್ದಾಳೆ Shailendra Beldale launches various projects

ಬೀದರ್  23: ನಮ್ಮ ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನಮ್ಮ ಪ್ರಮುಖ ಉದ್ದೇಶವಾಗಿದೆ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಆಗಬೇಕಾದರೆ ಮೂಲಭೂತ ಸೌಕರ್ಯಗಳು ಬಲವಾಗಿರಬೇಕು. ಈ ನಿಟ್ಟಿನಲ್ಲಿ ರಸ್ತೆ, ನೀರು, ವಿದ್ಯುತ್, ಸಮುದಾಯ ಭವನ ಸೇರಿದಂತೆ ಅನೇಕ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಹೇಳಿದರು.ಬೀದರ್ ದಕ್ಷಿಣ ಕ್ಷೇತ್ರದ ಸಿರ್ಸಿ (ಎ) ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ನನ್ನ ಸೇವೆ ಜನಪರವಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಗ್ರಾಮಗಳ ಅಭಿವೃದ್ಧಿಯಿಂದಲೇ ದೇಶದ ಅಭಿವೃದ್ಧಿ ಸಾಧ್ಯ. ಆದ್ದರಿಂದ ಪ್ರತಿಯೊಂದು ಗ್ರಾಮವೂ ಮಾದರಿ ಗ್ರಾಮವಾಗಬೇಕು ಎಂಬುದು ನನ್ನ ಆಶಯ ಎಂದು ತಿಳಿಸಿದರು.

ಇಂದು ನಮ್ಮ ಕ್ಷೇತ್ರದ ಅಭಿವೃದ್ಧಿಯ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆಯನ್ನು ಇಡುತ್ತಿರುವ ಸಂತೋಷದ ಕ್ಷಣ ಇದು. ನಮ್ಮ ಗ್ರಾಮ ಮತ್ತು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕೈಗೊಳ್ಳುತ್ತಿರುವ ಈ ಯೋಜನೆಗಳು ಜನಜೀವನವನ್ನು ಸುಧಾರಿಸುವುದಕ್ಕೆ ಪ್ರಮುಖವಾದ ಪಾತ್ರ ವಹಿಸಲಿವೆ.ಅಭಿವೃದ್ಧಿ ಎಂದರೆ ಕೇವಲ ಕಟ್ಟಡಗಳ ನಿರ್ಮಾಣವಲ್ಲ, ಅದು ಜನರ ಬದುಕಿನಲ್ಲಿ ಸುಧಾರಣೆ ತರುವ ಪ್ರಕ್ರಿಯೆ. ಉತ್ತಮ ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿ ನಮ್ಮ ಪ್ರಮುಖ ಗುರಿಯಾಗಿದೆ. ಈ ದಿಕ್ಕಿನಲ್ಲಿ ನಾವು ತೆಗೆದುಕೊಳ್ಳುತ್ತಿರುವ ಪ್ರತಿಯೊಂದು ಹೆಜ್ಜೆಯೂ ಜನರ ಭವಿಷ್ಯವನ್ನು ಬಲಪಡಿಸುವುದಕ್ಕೆ ಸಹಕಾರಿಯಾಗುತ್ತದೆ.ನಾನು ಜನರ ನಂಬಿಕೆಗೆ ತಕ್ಕಂತೆ ಕೆಲಸ ಮಾಡುತ್ತಿದೆ. ಯಾವುದೇ ಕಾಮಗಾರಿಯೂ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೇ, ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವುದು ನಮ್ಮ ಆದ್ಯತೆಯಾಗಿದೆ.

ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸಹ ಇದನ್ನು ಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಬೇಕು ಎಂದರು.ಬಸವೇಶ್ವರ ದೇವಸ್ಥಾನ ನಿರ್ಮಾಣ ಕಾಮಗಾರಿಗೆ ?15 ಲಕ್ಷ, ಮಹರ್ಷಿ ವಾಲ್ಮೀಕಿ ಭವನ ನಿರ್ಮಾಣಕ್ಕೆ 30 ಲಕ್ಷ, ಮೌನೇಶ್ವರ ದೇವಸ್ಥಾನದ ಬಳಿ ಭವನ ನಿರ್ಮಾಣಕ್ಕೆ 5 ಲಕ್ಷ,ರೇವಣಸಿದ್ದೇಶ್ವರ ದೇವಸ್ಥಾನದ ಬಳಿ ಭವನ ನಿರ್ಮಾಣಕ್ಕೆ 5 ಲಕ್ಷ, ಲಿಂಗಾಯತ ಶ್ಮಶಾನ ಭೂಮಿಗೆ ತಂತಿ ಬೇಲಿ ಅಳವಡಿಸಲು ?5 ಲಕ್ಷ,ಗ್ರಾಮದ ವಿವಿಧ ಕಡೆಗಳಲ್ಲಿ (ನಾಲ್ಕು) 12 ಲಕ್ಷ ವೆಚ್ಚದಲ್ಲಿ ಹೈಮಾಸ್ಟ್‌ ದೀಪಗಳ ಅಳವಡಿಕೆ ಕಾಮಗಾರಿಗೆ ಚಾಲನೆ ನೀಡಲಾಗಿದ್ದು,ಈ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ಜವಾಬ್ದಾರಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಮೇಲಿದೆ. ಸಾರ್ವಜನಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ತೊಂದರೆಗಳಿಲ್ಲದೆ ಕಾರ್ಯಗಳನ್ನು ಮುನ್ನಡೆಸಬೇಕು ಎಂದು ತಿಳಿಸಿದರು.

ಬಳಿಕ ಗ್ರಾಮದಲ್ಲಿ ಮಲ್ಲಿಕಾರ್ಜುನ ದೇವಸ್ಥಾನದ ಸಮೀಪ ನಮ್ಮ ಅನುದಾನದಲ್ಲಿ ನಿರ್ಮಿಸಲಾದ ಭವನವನ್ನು ಲೋಕಾರೆ​‍್ಣ ಮಾಡಲಾಯಿತು. ಕುರುಬಗೊಂಡ ಸಮಾಜದ ಮುಖಂಡರು ಕಂಬಳಿ ಹೊದಿಸಿ ಸನ್ಮಾನಿಸಿ, ಕುರಿ ಮರಿಯನ್ನು ಉಡುಗೊರೆಯಾಗಿ ನೀಡಿ ಆತ್ಮೀಯ ಗೌರವ ವ್ಯಕ್ತಪಡಿಸಿದರು.ಈ ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದ ಎಲ್ಲಾ ಗ್ರಾಮಸ್ಥರಿಗೆ ಹೃತ್ಪೂರ್ವಕ ಧನ್ಯವಾದಗಳು. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ನಿಮ್ಮ ವಿಶ್ವಾಸಕ್ಕೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮುಖಂಡರಾದ ರಾಜ ರೆಡ್ಡಿ ಶಾಬಾದ, ಗುರುನಾಥ ರಾಜಗೀರ, ಶಿವಕುಮಾರ ಸ್ವಾಮಿ, ಶಿವಶರಣಪ್ಪ ಆಗರಗಿ, ಕಾಶಿನಾಥ ಅಲ್ದಿ,ಅಡೆಪ್ಪ ಶೇರಿಕಾರ, ಸೋಮನಾಥ ಉಪ್ಪಿನ, ಘಾಳೇಪ್ಪ ಚಟನಳ್ಳಿ, ಪುಂಡಲೀಕ ಟುಬಾಕ, ಸುಭಾಷ ಮೆಟಗೆ, ಭೀಮರಾವ ಬೀರಾದರ, ಬುದಯ್ಯಾ ಆಚಾರಿ,ಸಂಜುಕುಮಾರ ಅಲ್ದಿ, ಇಬ್ರಾಹಿಂ, ರಾಮಕೃಷ್ಣ, ರಾಕೇಶ ಹುಮನಾಬಾದೆ,ವೆಂಕಟರೆಡ್ಡಿ, ಹೇಮಾ ತುಕ್ಕಾರೆಡ್ಡಿ,ಅರುಣಕುಮಾರ ಪಾಟೀಲ, ಶರಣು ಸಿದ್ದಾ, ರಾಜಕುಮಾರ ಮುಲಗಿ,ಮಾರುತಿ ಪೋತಾ, ಸಿದ್ದಪ್ಪ ಗುದಗಿ, ಪ್ರಭು ಮಂದಕನಳ್ಳಿ ಮತ್ತಿತರರು ಉಪಸ್ಥಿತರಿದ್ದರು.ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರ ಮಾಧ್ಯಮ ಸಂಯೋಜಕ ಸಹಾಯಕ ನಾಗೇಶ ಸಿದ್ದಾ.