ಶಕ್ತಿ ಯೋಜನೆ ಸಂಭ್ರಮಾಚರಣೆ
Shakti Scheme celebration
ತಾಳಿಕೋಟಿ 15: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದ ಇಲ್ಲಿಯವರೆಗೆ ಸುಮಾರು 500 ಕೋಟಿ ಫಲಾನುಭವಿಗಳು ಸದುಪಯೋಗ ಪಡಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ಸ್ಥಳೀಯ ಗ್ಯಾರಂಟಿ ಯೋಜನೆ ಸಮಿತಿ ವತಿಯಿಂದ ಸಂಭ್ರಮಾಚರಣೆ ಹಾಗೂ ಪೂಜಾ ಕಾರ್ಯಕ್ರಮವನ್ನು ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಯಿತು.
ಪುರಸಭೆ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಪ್ರಭುಗೌಡ ಮದರಕಲ್ಲ ಮಾತನಾಡಿ ಕಾಂಗ್ರೆಸ್ ಸರ್ಕಾರವು ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ "ಶಕ್ತಿ" ಯೋಜನೆಯಿಂದ ಕಳೆದ ಎರಡು ವರ್ಷಗಳಲ್ಲಿ 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ್ದು ಈ ಯೋಜನೆಗೆ ಇಲ್ಲಿಯವರೆಗೆ ರೂ.12.669 ಕೋಟಿ ಹಣ ವಿನಿಯೋಗಿಸಲಾಗಿದೆ, ಇಡೀ ದೇಶದಲ್ಲಿಯೇ ಇದೊಂದು ಮಾದರಿ ಯೋಜನೆಯಾಗಿದೆ. ರಾಜ್ಯದ ಮಹಿಳೆಯರನ್ನು ಸ್ವಾವಲಂಬಿಯನ್ನಾಗಿ ಮಾಡಿಸುವಲ್ಲಿ ಪೂರಕವಾದ ಈ ಯೋಜನೆಯನ್ನು ಜಾರಿಗೆ ತಂದ ಮಾನ್ಯ ಮುಖ್ಯಮಂತ್ರಿಗಳಿಗೆ, ಅವರ ಮಂತ್ರಿ ಮಂಡಲದ ಸಚಿವರಿಗೆ ಹಾಗೂ ಕ್ಷೇತ್ರದ ಶಾಸಕರಿಗೆ ಅಭಿನಂದಿಸುತ್ತೇನೆ ಎಂದು ತಿಳಿಸಿದರು. ಗ್ಯಾರೆಂಟಿ ಯೋಜನಾ ಸಮಿತಿ ಅಧ್ಯಕ್ಷ ಸಂಗಮೇಶ ದೇಸಾಯಿ ಮಾತನಾಡಿ ಈ ಯೋಜನೆಯಿಂದಾಗಿ ಬಡಸಾಮಾನ್ಯ ಕುಟುಂಬದ ಮಹಿಳೆಯರಿಗೆ ತಮ್ಮ ಜೀವನ ಸಂಸಾರ ಭದ್ರಗೊಳಿಸಲು ತುಂಬಾ ಸಹಕಾರಿಯಾಗಿದೆ ಎಂದರು.
ಪುರಸಭೆ ಮಾಜಿ ಅಧ್ಯಕ್ಷೆ ನೀಲಮ್ಮಗೌಡತಿ ಪಾಟೀಲ ಮಾತನಾಡಿ ಕಾಂಗ್ರೆಸ್ ಸರ್ಕಾರದ ಈ 5 ಯೋಜನೆಗಳಲ್ಲಿ ಶಕ್ತಿ ಯೋಜನೆ ಮಹಿಳೆಯರಿಗೆ ಅತಿ ಹೆಚ್ಚು ಉಪಯುಕ್ತವಾದ ಯೋಜನೆಯಾಗಿದೆ ಮಹಿಳಾ ಸಬಲೀಕರಣದ ದೃಷ್ಟಿಯಿಂದ ಇದು ಬಹುದೊಡ್ಡ ಯೋಜನೆಯಾಗಿದೆ ಇದರಿಂದ ಕೋಟ್ಯಂತರ ಕುಟುಂಬಗಳಿಗೆ ಅನುಕೂಲವಾಗಿದೆ ಇದಕ್ಕಾಗಿ ನಾನು ಮಾನ್ಯ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕ್ಷೇತ್ರದ ಶಾಸಕರಿಗೆ ಅಭಿನಂದಿಸುತ್ತೇವೆ ಎಂದರು.
ಪುರಸಭೆ ಅಧ್ಯಕ್ಷೆ ಜುಬೇದ ಬೇಗಂ ಜಮಾದಾರ, ಉಪಾಧ್ಯಕ್ಷೆ ಗೌರಮ್ಮ ಕುಂಬಾರ, ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷೆ ಅಂಬಿಕಾ ಪಾಟೀಲ, ಪುರಸಭೆ ಸದಸ್ಯೆ ಅಕ್ಕಮಹಾದೇವಿ ಕಟ್ಟಿಮನಿ, ಅಶ್ವಿನಿ ಪಾಟೀಲ, ನಿಂಗಮ್ಮ ಪಾಟೀಲ, ಜ್ಯೋತಿ ಮೈಲೇಶ್ವರ, ಸಂಗನಗೌಡ ಅಸ್ಕಿ, ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾದ ಇಬ್ರಾಹಿಂ ಮನ್ಸೂರ,ಮಹೇಶ ಚಲವಾದಿ, ಮಹಿಬೂಬಅಲಿ ಮಕಾಂದಾರ,ಮೋದಿನ ನಗಾರ್ಚಿ, ಮಲ್ಲು ಕುಂಬಾರ, ಆಸೀಫ ಕೆಂಬಾವಿ, ಘಟಕ ವ್ಯವಸ್ಥಾಪಕ ಎ.ಬಿ.ಭೋವಿ, ಸಂಚಾರ ನೀರೀಕ್ಷಕ ಎನ್. ಐ.ಬಿರಾದಾರ, ಸ.ಕಾ.ಅ. ರಮೇಶ್ ತಾಳಿಕೋಟಿ ಲೆಕ್ಕಪತ್ರ ಮೇಲ್ವಿಚಾರಕ ಡಿ ಎಂ ನದಾಫ್ ಸಿಬ್ಬಂದಿ ಮೇಲ್ವಿಚಾರಕ ಬಿ. ಬಿ.ಚೋಕಾವಿ, ಚಾಲಕ ಕೆ.ಹೆಚ್.ಓಲೆಕಾರ, ಸಾ.ನಿ. ಎಸ್.ಬಿ.ಕನ್ನೊಳ್ಳಿ, ಸಂಚಾರ ನೀರೀಕ್ಷಕ ಎಸ್.ಬಿ.ಆಲ್ದಾಳ, ಸಾ.ನಿ.ಕೆ.ಸಿ. ಲಕ್ಕುಂಡಿಮಠ, ಎಂ.ಎಂ.ಚಲವಾದಿ, ಹಾಗೂ ಘಟಕದ ಸಿಬ್ಬಂದಿಗಳು ಸಿಬ್ಬಂದಿಗಳು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 