ಪ್ರಧಾನಿ ನರೇಂದ್ರ ಮೋದಿ ಅವರ 2ನೇ ಪ್ರಧಾನ ಕಾರ್ಯದರ್ಶಿಯಾಗಿ ಶಕ್ತಿಕಾಂತ ದಾಸ್ ನೇಮಕ

Shaktikant Das appointed as Prime Minister Narendra Modi's 2nd Principal Secretary

ನವದೆಹಲಿ 22: ಆರ್‌ಬಿಐ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ 2ನೇ ಪ್ರಧಾನ ಕಾರ್ಯದರ್ಶಿಯಾಗಿ ಕೇಂದ್ರ ಸರ್ಕಾರ ಶನಿವಾರ ನೇಮಕ ಮಾಡಿದೆ.

ನಿವೃತ್ತ ಐಎಎಸ್ ಅಧಿಕಾರಿ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನ ಮಂತ್ರಿಗಳ 2ನೇ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲು ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ. ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಸುತ್ತೋಲೆ ತಿಳಿಸಿದೆ.

ಶಕ್ತಿಕಾಂತ್ ದಾಸ್ ಅವರು ಡಿಸೆಂಬರ್ 2018 ರಿಂದ ಡಿಸೆಂಬರ್ 2024 ರವರೆಗೆ ಆರು ವರ್ಷಗಳ ಕಾಲ ಆರ್‌ಬಿಐ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದರು. ಕಳೆದ ಡಿಸೆಂಬರ್ 10 ರಂದು ನಿವೃತ್ತರಾಗಿದ್ದರು. ಆರ್ ಬಿಐ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿತ್ತು.