ಶಂಭುಲಿಂಗಗೌಡ ಪಾಟೀಲ ರಾಜ್ಯ ಹಿರಿಯ ಉಪಾಧ್ಯಕ್ಷರಾಗಿ ನೇಮಕ
Shambhulingagowda Patil appointed as State Senior Vice President
ಕೊಪ್ಪಳ 23: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ರಾಜ್ಯಾಧ್ಯಕ್ಷ ಎಲ್. ಬೈರ್ಪ ಅವರು, ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಶಂಭುಲಿಂಗಗೌಡ ಪಾಟೀಲ ಹಲಗೇರಿ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಕೇಂದ್ರ ಸಂಘದ ರಾಜ್ಯ ಹಿರಿಯ ಉಪಾಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಪತ್ರವನ್ನು ಹಸ್ತಾಂತರಿಸಿದರು.
ನೇಮಕದ ಬಳಿಕ ಮಾತನಾಡಿದ ಶಂಭುಲಿಂಗಗೌಡ ಪಾಟೀಲ, ರಾಜ್ಯದ ನಿವೃತ್ತ ಸರ್ಕಾರಿ ನೌಕರರ ಹಿತಾಸಕ್ತಿಯ ರಕ್ಷಣೆ ತಮ್ಮ ಮೊದಲ ಆದ್ಯತೆಯಾಗಿದ್ದು, ಪಿಂಚಣಿ, ವೈದ್ಯಕೀಯ ಸೌಲಭ್ಯ, ಆರ್ಥಿಕ ಭದ್ರತೆ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಸಂಘವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಹೇಳಿದರು.
ರಾಜ್ಯ ಹಾಗೂ ಜಿಲ್ಲಾ ಘಟಕಗಳೊಂದಿಗೆ ಸಮನ್ವಯ ಸಾಧಿಸಿ, ನಿವೃತ್ತ ನೌಕರರ ಧ್ವನಿಯನ್ನು ಸರ್ಕಾರದ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಪ್ರತಿನಿಧಿಸುವ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ರಾಜ್ಯದ ಎಲ್ಲ ಜಿಲ್ಲೆಗಳ ನಿವೃತ್ತ ನೌಕರರನ್ನು ಒಗ್ಗೂಡಿಸಿ, ಅವರ ಹಕ್ಕುಗಳ ರಕ್ಷಣೆ ಹಾಗೂ ಕಲ್ಯಾಣಕ್ಕಾಗಿ ನಿರಂತರ ಹೋರಾಟ ನಡೆಸುವುದಾಗಿ ತಿಳಿಸಿದರು.
ಸಂಘದ ಮುಖಂಡರು ಮಾತನಾಡಿ, ಶಂಭುಲಿಂಗಗೌಡ ಪಾಟೀಲ ಅವರ ಸಂಘಟನಾ ಅನುಭವ, ಸೇವಾ ಮನೋಭಾವ ಹಾಗೂ ನಾಯಕತ್ವದ ಗುಣಗಳು ಸಂಘದ ಬೆಳವಣಿಗೆಗೆ ಮತ್ತಷ್ಟು ಬಲ ನೀಡಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ನಿವೃತ್ತ ಸರ್ಕಾರಿ ನೌಕರರು ಶಂಭುಲಿಂಗಗೌಡ ಪಾಟೀಲ ಅವರನ್ನು ಅಭಿನಂದಿಸಿ, ಅವರ ಅವಧಿಯಲ್ಲಿ ಸಂಘ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಎಲ್. ಬೈರ್ಪ, ಪ್ರಧಾನ ಕಾರ್ಯದರ್ಶಿ ರಂಗೇಗೌಡ, ಹಿರಿಯ ಉಪಾಧ್ಯಕ್ಷ ಎನ್. ನಂಜಪ್ಪ, ಉಪಾಧ್ಯಕ್ಷ ಮುನಿದೇವಕುಮಾರ, ಶ್ರೀಮತಿ ಪ್ರಭಾ, ಕಾರ್ಯದರ್ಶಿ ನಾರಾಯಣಸ್ವಾಮಿ, ಜಂಟಿ ಕಾರ್ಯದರ್ಶಿ ನಾಗೇಂದ್ರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಸದಾನಂದ ನೆಲಕುದ್ರಿ, ಸಮಾಜಸೇವಕರಾದ ದ್ಯಾಮಣ್ಣ ಬಡಿಗೇರ ಹಾಗೂ ಕಳಕನಗೌಡ ಪಾಟೀಲ ಹಲಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 