ಶಂಕರಾಚಾರ್ಯರು ಧ್ರುವನಕ್ಷತ್ರದಂತೆ : ಕುಲಕರ್ಣಿ
ಬೆಳಗಾವಿ, 09: ಮಧುರವಾದ ಮಾತುಗಳ ಮೂಲಕವೇ ಪ್ರತಿಯೊಬ್ಬರ ಮನಸ್ಸನ್ನು ಪರಿವರ್ತನೆ ಮಾಡಿ ಧರ್ಮ ಕಟ್ಟುವ ಕೆಲಸವನ್ನು ಮಾಡಿದ ಶಂಕರಾಚಾರ್ಯರು ಭಾರತದ ಇತಿಹಾಸದಲ್ಲಿ ಧ್ರುವ ನಕ್ಷತ್ರದಂತೆ ಪ್ರಕಾಶಮಾನರಾಗಿರುವ ಮಹಾಪುರುಷರಲ್ಲಿ ಪ್ರಮುಖರು ಎಂದು ಜಿ.ಆರ್.ಕುಲಕರ್ಣಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರುಗಳ ಸಯುಕ್ತಾಶ್ರಯದಲ್ಲಿ ಗುರುವಾರ (ಮೇ.9) ರಂದು ನಗರದ ಬಸವರಾಜ ಕಟ್ಟೀಮನಿ ಸಭಾಭವನದಲ್ಲಿ ನಡೆದ ಶಂಕರಾಚಾರ್ಯರ ಜಯಂತಿ ಸಮಾರಂಭದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.
ಭಾರತದಲ್ಲಿ ಮಾತ್ರವಲ್ಲದೆ, ಜಗತ್ತಿನ ತತ್ವಶಾಸ್ತ್ರದ ಇತಿಹಾಸದಲ್ಲಿ ಎಂದಿಗೂ ಶಾಶ್ವತವಾಗಿ ಉಳಿಯುವ ಹೆಸರು ಶ್ರೀ ಶಂಕರಚಾರ್ಯರದು.
ಪ್ರಾಚೀನ ಕಾಲದಲ್ಲಿ ಪ್ರಯಾಣ ಮಾಡುವುದು ಅತಿ ಕಷ್ಟಕರವಾದ ಕೆಲಸವಾಗಿದ್ದಾಗ ಶಂಕರಾಚಾರ್ಯರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸಂಚರಿಸಿ ಜನಮನ ಗೆದ್ದ ಮಹಾಪುರುಷರು ಎಂದು ಕುಲಕಣರ್ಿ ಅವರು ಬಣ್ಣಿಸಿದರು.
ಕಾರ್ಯಕ್ರವನ್ನು ಉದ್ಘಾಟಿಸಿ, ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ ಉಪ ವಿಭಾಗಾಧಿಕಾರಿ ಡಾ.ಕವಿತಾ ಯೋಗಪ್ಪನವರ ಅವರು ಬ್ರಹ್ಮಸೂತ್ರವನ್ನು ಬರೆದ ಮಹಾನ್ ದಿವ್ಯಪುರುಷ ಶಂಕರಾಚಾರ್ಯರು ಎಂದು ಹೇಳಿದರು.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಶಂಕರಾಚಾರ್ಯರ ಜಯಂತಿಯನ್ನು ಸರಳವಾಗಿ ಆಚರಿಸಲಾಗಿದ್ದು, ಮುಂದಿನ ಬಾರಿ ಅದ್ಧೂರಿಯಾಗಿ ಆಚರಿಸುವ ಮೂಲಕ ಅವರ ವಿಚಾರಧಾರೆಗಳನ್ನು ಹೆಚ್ಚು ಹೆಚ್ಚು ಜನರಿಗೆ ತಲುಪಿಸಲಾಗುವುದು ಎಂದರು.
ಉಪ ನಿದರ್ೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಾದ ಸೀಬಿರಂಗಯ್ಯ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರ ಉಪನಿದರ್ೇಶಕರಾದ ಗುರುನಾಥ ಕಡಬೂರ, ಬಿ.ಆರ್.ಪಾಟೀಲ ಉಪಸ್ಥಿತರಿದ್ದರು.
ಶ್ರೀರಂಗ ಜೋಶಿ ಅವರು ನಾಡಗೀತೆ ಪ್ರಸ್ತುತ ಪಡಿಸಿದರು. ನೆಹರೂ ಯುವ ಕೇಂದ್ರದ ನಿವೃತ್ತ ಅಧಿಕಾರಿ ಎಸ್.ಯು.ಜಮಾದಾರ ಅವರು ನಿರೂಪಿಸಿದರು.
ಕೊನೆಯಲ್ಲಿ ಆರತಿ ಬೆಳಗುವ ಮೂಲಕ ಕಾರ್ಯ ಕ್ರಮವನ್ನು ಮುಕ್ತಾಯಗೊಳಿಸಲಾಯಿತು. ವಿವಿಧ ಸಂಘಸಂಸ್ಥೆಗಳು ಹಾಗೂ ಸಮಾಜದ ನೂರಾರು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 