ಸಾವಿತ್ರಿ ಬಾಯಿಪುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಶಾಂತಾ ಘಡ್ಡದ ಆಯ್ಕೆ
Shanta Gadda selected for Savitri Baipule Best Teacher Award
ಕಂಪ್ಲಿ 02: ದಕ್ಷಿಣ ಭಾರತದ ಸಾವಿತ್ರಿ ಬಾಯಿ ಪುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಕಂಪ್ಲಿಯ ಶಾಂತಾ ಘಡ್ಡದ ಭಾಜನರಾಗಿದ್ದಾರೆ. ಆಂದ್ರ ಪ್ರದೇಶದ ಗುರುಚೈತನ್ಯ ಉಪಾಧ್ಯಯ ಸಂಘವು ಸಾವಿತ್ರ ಬಾಯಿಪುಲೆ ಜನ್ಮದಿನದ ಪ್ರಯುಕ್ತ ಪ್ರತಿ ವರ್ಷ ನೀಡುವ ಸಾವಿತ್ರಿ ಬಾಯಿಪುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಕಂಪ್ಲಿ ತಾಲೂಕಿನ ಸಣಾಪುರ ಗ್ರಾಪಂ ವ್ಯಾಪ್ತಿಯ ಅರಳಳ್ಳಿತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶಾಂತಾ ಘಡ್ಡದ ಇವರಿಗೆ ಒಲಿದು ಬಂದಿದೆ. ಸಂಘವು ದೇಶದ 12 ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಒಳ್ಳೆಯ ಸೇವೆ ಸಲ್ಲಿಸಿದ ಶಿಕ್ಷಕರನ್ನು ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ನೀಡುತ್ತಿದೆ. 12 ರಾಜ್ಯಗಳ ಪೈಕಿ ಕರ್ನಾಟಕದಿಂದ ಕಠಿಣ ಪರಿಶ್ರಮ, ಶಿಕ್ಷಣಕ್ಕೆ ನೀಡಿದ ಕೊಡುಗೆ ಹಾಗೂ ಇವರ ಸೇವೆಯನ್ನು ಗುರುತಿಸಿ, ಕಂಪ್ಲಿಯ ಸಹ ಶಿಕ್ಷಕಿ ಶಾಂತಾ ಇವರನ್ನು ಆಯ್ಕೆ ಮಾಡಿರುವುದು ಹರ್ಷದಾಯಕವಾಗಿದೆ. ಜ.03ರಂದು ವಿಜಯವಾಡದಲ್ಲಿ ತುಮ್ಮಲಪಲ್ಲಿ ಕಲಾಕ್ಷೇತ್ರದಲ್ಲಿ ನಡೆಯುವ ಪ್ರಶಸ್ತಿ ಪುರಸ್ಕಾರ ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕಾರ ಸ್ವೀಕರಿಸಲಿದ್ದಾರೆ. ಈ ಹಿಂದೆ ಕರ್ನಾಟಕ ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿರುವುದು ಅವಿಸ್ಮರಣೀಯವಾಗಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 