ಮುಂಬೈ 08: ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ನಾಯಕತ್ವವನ್ನು ವಹಿಸಿಕೊಳ್ಳಲು ತಾವು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿರುವುದನ್ನು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಬೆಂಬಲಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಪವಾರ್ ಅವರು, ಟಿಎಂಸಿ ನಾಯಕಿಯು ಸಾಮರ್ಥ್ಯ ಹೊಂದಿದ್ದಾರೆ, ವಿರೋಧ ಪಕ್ಷಗಳ ಮೈತ್ರಿಕೂಟವನ್ನು ಮುನ್ನಡೆಸುವ ತಮ್ಮ ಬಯಕೆಯನ್ನು ವ್ಯಕ್ತಪಡಿಸುವ ಹಕ್ಕು ಅವರಿಗೆ ಇದೆ ಎಂದು ಹೇಳಿದ್ದಾರೆ.