ಶಾರದಾದೇವಿ ಕೋರೆ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ
Sharada Devi Kore School's Annual Friendship Conference
ಲೋಕದರ್ಶನ ವರದಿ
ಶಾರದಾದೇವಿ ಕೋರೆ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ
ಚಿಕ್ಕೋಡಿ 04: ಕೆ ಎಲ್‌ಇ ಸಂಸ್ಥೆಯ ಅಂಕಲಿ ಗ್ರಾಮದಲ್ಲಿ ನಡೆಯುತ್ತಿರುವ ಈ ಸಂಸ್ಥೆಯ ನಿಸರ್ಗದ ಮಡಿಲಿನಲ್ಲಿ ಬೆಳೆಯುವ ಮಕ್ಕಳು ಅತ್ಯಂತ ಪ್ರತಿಭಾವಂತರಾಗಿ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಬೆಳೆಯುತ್ತಾರೆಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ನಿರ್ದೇಶಕರಾದ ಆರ್ ಎಸ್ ಸೀತಾರಾಮ್ ಹೇಳಿದರು.
ಅವರು ಬುಧವಾರದಂದು ಚಿಕ್ಕೋಡಿ ತಾಲೂಕಿನ ಅಂಕಲಿಯ ಕೆ.ಎಲ್.ಇ. ಸಂಸ್ಥೆಯ ಶಾರದಾದೇವಿ ಕೋರೆ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಪ್ರಸಕ್ತ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಈ ಸಮಾರಂಭದ ಅಧ್ಯಕ್ಷತೆಯನ್ನು ಸ್ಥಾನಿಕ ಸಲಹಾ ಸಮಿತಿಯ ಸದಸ್ಯರಾದ ಸುರೇಶ್ ಪಾಟೀಲ್, ಅತಿಥಿಯಾಗಿ ಚಿಕ್ಕೋಡಿಯ ಕೆ ಎಲ್‌ಇ ಆಸ್ಪತ್ರೆಯ ಚಿಕ್ಕ ಮಕ್ಕಳ ತಜ್ಞರಾದ ಡಾಕ್ಟರ್ ಶಂಕರ್ ತೋರಸೆ ಹಾಜರಿದ್ದರು.
ಸಿಬ್ಬಂದಿ ವರ್ಗ ಹಾಗೂ ಇಲ್ಲಿಯ ವಿದ್ಯಾರ್ಥಿಗಳಿಗೆ ಕಲಿಕೆಗಾಗಿ ಆಧುನಿಕ ತಂತ್ರಜ್ಞಾನದ ಎಲ್ಲ ಸೌಲಭ್ಯಗಳನ್ನು ಡಾ. ಪ್ರಭಾಕರಣ್ಣಾ ಕೋರೆಯವರು ಇಲ್ಲಿ ಒದಗಿಸಿದ್ದಾರೆ. ಮೆಟ್ರೋ ಪೊಲಿಟನ್ ನಗರದಂತೆ ಕಲಿಕೆಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ನೋಡಿ ನನಗೆ ಅತೀವ ಸಂತೋಷವಾಗಿದೆ. ಇಲ್ಲಿನ ಸೌಲಭ್ಯವನ್ನು ಉಪಯೋಗಿಸಿಕೊಂಡು ಇಂದಿನ ಮಕ್ಕಳು ಮೌಲ್ಯಯುತವಾದ ಬದುಕನ್ನು ಬಾಳುವ ಹಾದಿಯಲ್ಲಿ ನಡೆಯಬೇಕು. ಜೊತೆಗೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತಾವೆಲ್ಲಾ ಅಧ್ಯಯನಶೀಲರಾಗಿ ಬದುಕಿನಲ್ಲಿ ಹೆಚ್ಚಿನದನ್ನು ಸಾಧಿಸಬೇಕೆಂದು ಕರೆ ನೀಡಿದರು. ವರ್ಷದುದ್ದಕ್ಕೂ ನಡೆದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಗೆ ಬಹುಮಾನ ವಿತರಿಸಲಾಯಿತು. ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸುರೇಶ್ ಪಾಟೀಲ್ ಮುಂಬರುವ ವಾರ್ಷಿಕ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿ ಸಂಸ್ಥೆಗೆ ಹಾಗೂ ಮನೆಗೆ ಹೆಸರು ತರಬೇಕೆಂದು ಶುಭ ಕೋರಿದರು.
ಅಜೀವ ಸದಸ್ಯರಾದಿಯಾಗಿ ಆವರಣದ ಎಲ್ಲ ಅಂಗ ಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿವರ್ಗ ಹಾಗೂ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾರದಾದೇವಿ ಕೋರೆ ಪ್ರೌಢಶಾಲೆಯ ಪ್ರಾಚಾರ್ಯರಾದ ಜ್ಯೋತಿ ತಮ್ಮಗೌಡ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ವಿಜಯ ನಾಯಿಕ ಮಾತನಾಡಿದರು. ಸಿ. ಬಿ ಚೌಗುಲಾ ಪರಿಚಯಿಸಿದರು. ಡಿ ಎಸ್ ಬಾಕಳೆ ನಿರೂಪಿಸಿದರು. ಕೊನೆಯಲ್ಲಿ ಎ ಡಿ ಜಾದವ್ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 