ಶರಣರ ಚಿಂತನೆಗಳು ಯಶಸ್ವಿ ಜೀವನಕ್ಕೆ ಸಹಕಾರಿ: ಸುನಂದಾ ವಾಲಿಕಾರ
Sharan's thoughts are helpful for a successful life: Sunanda Valikar
ಇಂಡಿ 10: ತಾಲ್ಲೂಕಿನ ತಡವಲಗಾ ಗ್ರಾಮ ಪಂಚಾಯಿತಿ ಆವರಣದಲ್ಲಿ ಹಡಪದ ಅಪ್ಪಣ್ಣ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ತಡವಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುನಂದಾ ವಾಲಿಕಾರ ಅವರು ಶರಣರ ತತ್ವ ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನಮ್ಮ ಜೀವನ ಯಶಸ್ವಿಗೆ ಸಹಕಾರ ಆಗಬಹುದು ಎಂದು ಹೇಳಿದ ಅವರು ಹಡಪದ ಅಪ್ಪಣ್ಣ" ನವರು ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು. ಇವರು "ಹಡಪದ" ಸಮಾಜದವರಾಗಿದ್ದು ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು.
ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿದ್ದ ಇವರು ವಿಶ್ವದ ್ರ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ "ಅನುಭವ ಮಂಟಪದಲ್ಲಿ" ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ, ಬಸವಣ್ಣನವರಿಗೆ ಯಾವುದೇ ರೀತಿಯ ಮುಜುಗುರವಾಗದಂತೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರ ಕಾರ್ಯಕ್ಷಮತೆಗೆ ಇಂದಿನವರಿಗೆ ಕನ್ನಡಿಯಾಗಿದೆಯೆಂದರೆ ತಪ್ಪಾಗಲಾರದು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಡವಲಗಾ ಗ್ರಾಮ ಪಂಚಾಯಿತಿ ಸದಸ್ಯರಾದ ಧರೇಪ್ಪ ನಾವಿ ರಮೇಶ ಬಡಿಗೇರ ರವಿ ಹೊಸಮನಿ, ಅಶೋಕ ಕಟ್ಟಿ ತಡವಲಗಾ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸ್ ಎನ್ ನಾಮದಾರ ಎಸ್ ಎಚ್ ವಾಲಿಕಾರ ಎಂ ಬಿ ನೇಂದ್ಯಾಳ ಎಂ ಎಸ್ ಪೂಜಾರಿ ಸಿದ್ದು ಮಿರ್ಜಿ ಸೈಫನ್ ಬಾಗವಾನ ಚಿದಾನಂದ ಗಣವಲಗಾ ಗುರುಬಾಯಿ ಆಳೂರ ಸವಿತಾ ಸಮಾಜದ ಮುಖಂಡರಾದ ಶಿವಯೋಗಪ್ಪ ನಾವಿ ತುಳಜಪ್ಪ ಹಡಪದ ಬಸವರಾಜ ನಾವಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 