ಸಂಭ್ರಮದ ಸ್ವಾತಂತ್ರೋತ್ಸವಕ್ಕೆ ಜಿಲ್ಲಾಡಳಿತ ಸಿದ್ದತೆ

ಬಾಗಲಕೋಟೆ: ಜಿಲ್ಲೆಯಲ್ಲಿ ಆಗಸ್ಟ 15 ರಂದು ಜರುಗಲಿರುವ ಸಂಭ್ರಮದ ಸ್ವಾತಂತ್ರೋತ್ಸವಕ್ಕೆ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ದುಗರ್ೇಶ ರುದ್ರಾಕ್ಷಿ ತಿಳಿಸಿದರು. 

ಜಿಲ್ಲಾ ಪಂಚಾಯತ ಸಭಾಭವನದಲ್ಲಿಂದು ಸ್ವಾಂತ್ರೋತ್ಸವ ದಿನಾಚರಣೆ ಕುರಿತು ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅ. 15 ರಂದು ಬೆಳಿಗ್ಗೆ 8.30 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ, 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವರಿಂದ ಧ್ವಜಾರೋಜಹಣ ಹಾಗೂ ಸ್ವಾತಂತ್ರ್ಯೋತ್ಸವದ ಸಂದೇಶದ ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಪಥಸಂಚಲನ ಕಾರ್ಯಕ್ರಮದಲ್ಲಿ ಪೋಲಿಸ್, ಗೃಹರಕ್ಷಕ ದಳ, ಸೇವಾದಳ, ಸ್ಕೌಟ್ ಆ್ಯಂಡ್ ಗೈಡ್ಸ್, ಎನ್.ಸಿ.ಸಿ. ಕೆಡೆಟ್ಗಳನ್ನು ಆಹ್ವಾನಿಸಲು ತಿಳಿಸಲಾಯಿತು. ಪಥ ಸಂಚಲನಕ್ಕೆ ವೇದಿಕೆ ಮುಂಬಾಗದಲ್ಲಿ ಮ್ಯಾಟ್ ಹಾಕುವ ವ್ಯವಸ್ಥೆ ಮಾಡಲು ತಿಳಿಸಿದರು. ಧ್ವಜಾರೋಹಣ ವ್ಯವಸ್ಥೆ ಮಾಡಲು ಭಾರತ ಸೇವಾದಳ, ಪೋಲಿಸ್ ಇಲಾಖೆ, ತಹಶೀಲ್ದಾರ ಹಾಗೂ ಯುವಜನ ಸೇವಾ ಹಾಗೂ ಕ್ರೀಡಾಧಿಕಾರಿಗಳಿಗೆ ವಹಿಸಲಾಯಿತು. 

       ಕಾರ್ಯಕ್ರಮ ಯಶಸ್ವಿಗೊಳಿಸಲು ವಿವಿಧ ಸಮಿತಿಗಳನ್ನು ರಚಿಸಲಾಯಿತು. ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಧ್ವಜ ಬಳಸುವದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಶಾಲಾ ಮಕ್ಕಳು ಪ್ಲಾಸ್ಟಿಕ್ ಧ್ವಜ ತರುವುದನ್ನು ಕಡ್ಡಾಯವಾಗಿ ನಿರ್ಭಂದಿಸಬೇಕು. 

 ಶಿಷ್ಟಾಚಾರಕ್ಕೆ ಲೋಪವಾಗದಂತೆ ಧ್ವಜ ಸಂಹಿತೆಗೆ ಯಾವುದೇ ತರಹ ಅಪಚಾರವಾಗದಂತೆ ನೋಡಿಕೊಳ್ಳಲು ಸೂಚಿಸಿದರು. ಐಎಸ್ಐ ಮತ್ತು ಬಿಐಎಸ್ ಮಾರ್ಕ ಹೊಂದಿರುವ ರಾಷ್ಟ್ರಧ್ವಜವನ್ನು ಮಾತ್ರ ಧ್ವಜಾರೋಹಣಕ್ಕೆ ಬಳಸಬೇಕೆಂದರು ಸೂಚಿಸಿದರು.

        ಕ್ರೀಡಾಂಗಣದಲ್ಲಿ ಸ್ಟೇಜ್ ನಿಮರ್ಾಣ, ಸ್ವಾತಂತ್ರ ಯೋಧರಿಗೆ, ಗಣ್ಯರಿಗೆ, ಶಾಸಕರಿಗೆ, ಸಂಸದರುಗಳಿಗೆ ಸೂಕ್ತ ಆಸನಗಳ ವ್ಯವಸ್ಥೆ ಕಲ್ಪಿಸಬೇಕು. ಧ್ವನಿವರ್ಧಕ ಹಾಗೂ ಜನರೇಟರ್ ವ್ಯವಸ್ಥೆಯನ್ನು ಕೈಗೊಳ್ಳಲು ಸೂಚಿಸಿದರು. ಜಿಲ್ಲಾಡಳಿತ ಭವನಕ್ಕೆ ಸೇರಿದಂತೆ ತಾಲೂಕ ಆಡಳಿತ ಭವನಕ್ಕೂ ವಿದ್ಯುತ್ ಅಲಂಕಾರ ಮಾಡುವಂತೆ ಸೂಚಿಸಲಾಯಿತು. 

          ಸ್ವಾತಂತ್ಯ ದಿನದಂದು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ರಿಯರ್ಸಲ್ ದಿನದಂದು ಕ್ರೀಡಾಂಗಣಕ್ಕೆ ಹೋಗಿ ಬರಲು ವಾಹನ ವ್ಯವಸ್ಥೆಯನ್ನು ಮಾಡುವಂತೆ ವಾಯವ್ಯ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚಿಸಿದರು. ಪೋಲಿಸ್ ಬಂದೂಬಸ್ತಿ ವ್ಯವಸ್ಥೆ ಮಾಡುವಂತೆ ಪೋಲಿಸ್ ಇಲಾಖೆಗೆ ಸೂಚಿಸಿದರು. ಶಾಲಾ ಮಕ್ಕಳಿಗೆ ಸಿಹಿತಿಂಡಿ ವಿತರಣೆ ಹಾಗೂ ಗಣ್ಯ ವ್ಯಕ್ತಿಗಳಿಗೆ ಅಲ್ಫೋಪಹಾರದ ವ್ಯವಸ್ಥೆ ಮಾಡಲು ತಿಳಿಸಿದರು.

       ಆ. 15 ರಂದು ಸರಕಾರೇತರ ಇಲಾಖೆ, ಸಂಸ್ಥೆಗಳಲ್ಲಿಯೂ ಸಹ ಧ್ವಜ ಸಂಹಿತೆಗೆ ಯಾವುದೇ ತರಹದ ಲೋಪವಾಗದಂತೆ ಕಡ್ಡಾಯವಾಗಿ ಧ್ವಜಾರೋಹಣ ನೆರವೇರಿಸಬೇಕು.

    ರಾಷ್ಟ್ರಧ್ವಜ ಕಟ್ಟುವ, ಅರಳಿಸುವ ಶಿಷ್ಠಾಚಾರ ಕುರಿತು ಸಂಪೂರ್ಣ ಮಾಹಿತಿಗಾಗಿ ಭಾರತ ಸೇವಾದಳದ ಜಿಲ್ಲಾ ಸಂಚಾಲಕ ಮಹೇಶ ಪತ್ತಾರ (ಮೊನಂ.9449953906) ಇವರನ್ನು ಸಂಪಕರ್ಿಸುವಂತೆ ಸಭೆಯಲ್ಲಿ ತಿಳಿಸಲಾಯಿತು. ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು, ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಲು ಸೂಚಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕ ಶಶಿಕಲಾ ಹುಡೇದ, ಡಿಎಸ್ಪಿ ಅಮಸಿದ್ದ ಗೋಂದಳೆ, ಆಹಾರ ಇಲಾಖೆಯ ಉಪನಿದರ್ೇಶಕ ಶ್ರೀಶೈಲ ಕಂಕಣವಾಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಬಿ.ಎಚ್.ಗೋನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಂತ ದೇಸಾಯಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಕಂದಾಯ ಇಲಾಖೆಯ ಶಿರಸ್ತೆದಾರ ಎಂ.ಬಿ.ಗುಡೂರ ಕಳೆದ ವರ್ಷದ ಸಭೆಯ ನಡಾವಳಿಯನ್ನು ಓದಿ ಹೇಳಿದರು.