ಹಾವೇರಿ: ಜು.06: ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಸೋಮವಾರ ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ಕ್ವಾರಂಟೈನ್ ಕೇಂದ್ರಗಳ ಸಿದ್ಧತೆ, ತಾಲೂಕಾ ಡೆಡಿಕೆಟೆಡ್ ಕೋವಿಡ್ ಆಸ್ಪತ್ರೆಗಳಿಗೆ ಭೇಟಿ ನೀಡಿ ಸಿದ್ಧತೆಗಳ ಪರಿಶೀಲನೆ ನಡೆಸಿದರು.
ಹಾನಗಲ್ ತಾಲೂಕಾ ಆಸ್ಪತ್ರೆ, ಅಕ್ಕಿಆಲೂರಿನ ಆಸ್ಪತ್ರೆ, ಹಿರೇಕೆರೂರಿನ ದೂದಿಹಳ್ಳಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ಶಾಲೆಯಲ್ಲಿ ಸಿದ್ಧತೆಮಾಡಿರುವ ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಹೆಚ್ಚುವರಿ ವೈದ್ಯಕೀಯ ಸೌಲಭ್ಯಗಳು, ಹಾಸಿಗೆ ಸೌಲಭ್ಯ, ಐಸೋಲೇಷನ್ ವಾಡರ್್ಗಳ ಸಿದ್ಧತೆಗಳ ಕುರಿತಂತೆ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಮನಿ, ತಾಲೂಕಾ ವೈದ್ಯಾಧಿಕಾರಿಗಳು, ತಹಶೀಲ್ದಾರಗಳು, ಕ್ವಾರಂಟೈನ್ ಕೇಂದ್ರಗಳ ಉಸ್ತುವಾರಿ ಅಧಿಕಾರಿ ಚೈತ್ರಾ ಇತರರು ಉಪಸ್ಥಿತರಿದ್ದರು.